ಅಕ್ರಮ ಮರಳುಗಾರಿಕೆ ಅವ್ಯಾಹತ, ಅಧಿಕಾರಿಗಳ ಮೌನ?ಲೋಕಸಭಾ ಚುನಾವಣಾ ನೀತಿ ಸಂಹಿತೆಯ ಮಧ್ಯೆಯೂ ಅಧಿಕಾರಿಗಳ ಭಯವಿಲ್ಲದೇ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದು, ರಾತ್ರೋ ರಾತ್ರಿ ವಾಹನಗಳಲ್ಲಿ ಮರಳು ಸಾಗಾಟ ನಡೆಯುತ್ತಿದ್ದರೂ ಕೂಡಾ ಜಿಲ್ಲಾಡಳಿತ, ಗಣಿ, ಪೊಲೀಸ್ ಹಾಗೂ ಕಂದಾಯ ಇಲಾಖೆ ಮೌನವಾಗಿರುವುದು ಅನುಮಾನಕ್ಕೆ ಕಾರಣವಾಗಿದೆ.