ಬಲಿಷ್ಠ ದೇಶಕ್ಕಾಗಿ ಪ್ರಧಾನಿ ಮೋದಿಗೆ ಮತ ಹಾಕಿ: ಬೊಮ್ಮಾಯಿಮುಂದಿನ ಐದು ವರ್ಷ ದೇಶವನ್ನು ಯಾರು ಮುನ್ನೆಡೆಸಬೇಕು, ಯಾವ ರೀತಿ ನಡೆಸಬೇಕು ಎನ್ನುವುದನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ಬಲಿಷ್ಠ ದೇಶ ಕಟ್ಟುವ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.