೧೩,೫೦೦ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಲು ಸೂಚನೆತಾಲೂಕಿನಲ್ಲಿ ಹಕ್ಕುಪತ್ರ ರಹಿತ ಎಲ್ಲ ೧೩,೫೦೦ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಕಾಲಹರಣ ಮಾಡುವುದು ಬೇಡ. ನವೆಂಬರ್ ೧ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಹಕ್ಕುಪತ್ರಗಳನ್ನು ವಿತರಿಸುವ ನಿಟ್ಟಿನಲ್ಲಿ ಸಮಯ ನಿಗದಿ ಪಡಿಸಿಕೊಂಡು ಕಾರ್ಯ ನಿರ್ವಹಿಸುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ತಹಸೀಲ್ದಾರ್ ರೇಣುಕಾ ಎಸ್. ಅವರಿಗೆ ಸೂಚಿಸಿದರು.