ಸಾಲ ಮಾಡಿ ಬೆಳೆ ಬೆಳೆಯುವ ರೈತರ ಬದುಕು ಹಸನಾಗಬೇಕಿದೆ. ಸರ್ಕಾರ ಹಾಗೂ ಸಹಕಾರಿ ಸಂಸ್ಥೆಗಳು ರೈತರ ಕಷ್ಟಕ್ಕೆ ಸ್ಪಂದಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆ ಕುರಿತು ಮುಂದಿನ ವಾರ ನಡೆಯುವ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.