ಬಂದ್ಗೆ ಹಾವೇರಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ, ಎಂಇಎಸ್ ನಿಷೇಧಕ್ಕೆ ಆಗ್ರಹಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ನಿರ್ವಾಹಕನ ಮೇಲಿನ ಮರಾಠಿಗರ ದೌರ್ಜನ್ಯ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಹಾವೇರಿ ಜಿಲ್ಲೆಯಲ್ಲಿ ಸ್ಪಂದನೆ ಸಿಕ್ಕಿಲ್ಲ. ಕೆಲವು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಬಿಟ್ಟರೆ, ವಾಹನ ಸಂಚಾರ, ಜನಜೀವನ, ವ್ಯಾಪಾರ ವಹಿವಾಟು ಎಂದಿನಂತಿದ್ದವು.