ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಲು ಒತ್ತಾಯಶಿಗ್ಗಾಂವಿ ತಾಲೂಕಿನಲ್ಲಿ ಕಲ್ಲು ಗಣಿಗಾರಿಕೆಯನ್ನು ಸಂಪೂರ್ಣ ಸ್ಥಗಿತಗೊಳಿಸಬೇಕು. ಇಲ್ಲವಾದರೆ ಕಲ್ಲು ಒಡೆಯುವ ಎಲ್ಲರಿಗೂ ಅವಕಾಶ ನೀಡಬೇಕು ಎಂದು ಅಖಿಲ ಕರ್ನಾಟಕ ಭೋವಿ ಯುವ ವೇದಿಕೆ, ಅಖಿಲ ಕರ್ನಾಟಕ ಭೋವಿ ಕಲ್ಲು-ಬಂಡೆ ಮಣ್ಣು ಮತ್ತು ಕಟ್ಟಡ ಕಾರ್ಮಿಕರ ವೇದಿಕೆಯ ತಾಲೂಕ ಘಟಕದ ಪದಾಧಿಕಾರಿಗಳು ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.