ಶಿಕ್ಷಣ ಪಡೆದು ಆರ್ಥಿಕವಾಗಿ ಸಬಲರಾಗಿಸ್ವಾತಂತ್ರ್ಯ ಪೂರ್ವದಿಂದಲೂ ದಲಿತರ ಮೇಲೆ ದಬ್ಬಾಳಿಕೆಗಳು ನಡೆಯುತ್ತಿವೆ. ಅವುಗಳನ್ನು ತಡೆಯುವುದಕ್ಕಾಗಿಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧಕ ಕಾಯಿದೆಯನ್ನು ಸರ್ಕಾರ ಜಾರಿಗೆ ತಂದು, ದೌರ್ಜನ್ಯ ಮಾಡಿದವರಿಗೆ ಶಿಕ್ಷೆ ನೀಡಿ, ದೌರ್ಜನ್ಯಕ್ಕೊಳಗಾದ ನಾಗರಿಕರಿಗೆ ನ್ಯಾಯ ದೊರಕಿಸಿಕೊಡುವುದಕ್ಕೆ ಮುಂದಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ವೆಂಕನಗೌಡ ಪಾಟೀಲ ಹೇಳಿದರು.