ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿದೆಹಲಿಯಲ್ಲಿ ಉಂಟಾಗುವ ವಾಯುಮಾಲಿನ್ಯದಿಂದ ಜನರಿಗೆ ಉಸಿರಾಟಕ್ಕೆ ತೊಂದರೆಯಾಗುತ್ತಿದೆ. ರಾಜ್ಯ, ದೇಶಗಳಿಗೆ ಗಡಿ ಇದೆ, ಆದರೆ ಪರಿಸರಕ್ಕೆ ಯಾವುದೇ ಗಡಿ ಇರುವುದಿಲ್ಲ. ಪ್ರಪಂಚದ ಯಾವುದೇ ಭಾಗದಲ್ಲಿ ಪರಿಸರಕ್ಕೆ ಹಾನಿಯಾದರೂ ಸಹ ಹಲವು ಪ್ರದೇಶಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ವಾಯು ಮಾಲಿನ್ಯ, ಜಲ ಮಾಲಿನ್ಯದಿಂದ ಪರಿಸರ ಹಾಳಾಗುತ್ತಿದೆ. ನಾವು ಸೇವಿಸುವ ಆಹಾರ ಶುದ್ಧವಾಗಿಲ್ಲ. ಇಂದು ಎಲ್ಲರೂ ಸಾಮಾನ್ಯವಾಗಿ ಮಿನರಲ್ ವಾಟರ್ ಕುಡಿಯುತ್ತಿದ್ದೇವೆ. ಆದರೆ ಆ ನೀರಿನಲ್ಲಿ ಮಿನರಲ್ಸ್ ಇಲ್ಲ. ಗಾಳಿ, ನೀರು ಹಾಗೂ ಆಹಾರ ಶುದ್ಧವಾಗಿರುವಂತೆ ನೋಡಿಕೊಳ್ಳಬೇಕು. ದೇಶಿ ಆಹಾರ ಪದ್ಧತಿ ಅನುಸರಿಸಬೇಕು. ನೈಸರ್ಗಿಕವಾಗಿ ದೊರೆಯುವ ನೀರನ್ನು ಕುಡಿಯಬೇಕು. ನಾನು ನೈಸರ್ಗಿಕವಾಗಿ ದೊರೆಯುವ ನೀರು ಕುಡಿಯುತ್ತೇನೆ ಸದೃಢವಾಗಿದ್ದೇನೆ