ಕುಡಿವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರ ವಹಿಸಿಗ್ರಾಪಂ ವಂತಿಕೆ ಹಣದಿಂದ ಬರ ನಿರ್ವಹಣೆ ಮಾಡಬೇಕು. ನೀರಿನ ಸಮಸ್ಯೆ ಉದ್ಭವಿಸದಂತೆ ಅಧಿಕಾರಿಗಳು ಎಚ್ಚರವಹಿಸಬೇಕು, ನಿರ್ಲಕ್ಷ್ಯ ಮಾಡಬಾರದು ಎಂದು ಶಾಸಕ ಬಸವರಾಜ ಶಿವಣ್ಣನವರ ಸೂಚಿಸಿದರು. ಬ್ಯಾಡಗಿ ಪಟ್ಟಣದ ತಾಪಂ ಸುವರ್ಣ ಸೌಧದಲ್ಲಿ ಶನಿವಾರ ಜರುಗಿದ ಬರಗಾಲದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು. ಕೇವಲ ಸರ್ಕಾರದ ಹಾಗೂ ಶಾಸಕರ ಕೆಲಸ ಮಾತ್ರವಲ್ಲ, ಸರ್ಕಾರದ ಕಡೆಗೆ ಬೊಟ್ಟು ಮಾಡಿ ತೋರಿಸದೇ ಸರ್ವ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರು ಪಿಡಿಒಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.