ಅಕ್ಷರ ಜ್ಞಾನಕ್ಕೆ ಭವಿಷ್ಯ ರೂಪಿಸುವ ಶಕ್ತಿ ಇದೆಶಿಕ್ಷಣದ ಪ್ರಾಮುಖ್ಯತೆ ಬಗೆಗೆ ಪ್ರತಿಯೊಬ್ಬರಲ್ಲಿಯೂ ಸಹ ಅರಿವು ಮೂಡುತ್ತಿದೆ. ಕಷ್ಟ ಇದ್ದರೂ ಸಹ ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಕಾಳಜಿ ವಹಿಸಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಶಾಲೆ, ಕಾಲೇಜು, ವಸತಿ ನಿಲಯ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಅನಿವಾರ್ಯತೆ ಸೃಷ್ಟಿಯಾಗಿದ್ದು, ಈ ನಿಟ್ಟಿನಲ್ಲಿ ಗಮನ ಹರಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.