ರಾಜಪ್ರಭುತ್ವ ತ್ಯಜಿಸಿ ದಾರ್ಶನಿಕರಾದ ಕನಕದಾಸಯುದ್ಧ ಪರಂಪರೆಯಿಂದ ಸಮಾಜಕ್ಕೆ ಕೊಡುಗೆ ನೀಡಲು ಅಸಾಧ್ಯ. ಹೀಗಾಗಿ ರಾಜಪ್ರಭುತ್ವ ತ್ಯಜಿಸಿ ದಾರ್ಶನಿಕರಾದ ಕನಕದಾಸರು, ಭಕ್ತಿಯನ್ನೇ ಶಕ್ತಿಯನ್ನಾಗಿಸಿಕೊಂಡು ದೇವರನ್ನು ಒಲಿಸಿಕೊಂಡ ಬದುಕಿನ ರೀತಿ ಅನುಕರಣೀಯ ಎಂದು ಶಾಸಕ ಬಸವರಾಜ ಶಿವಣ್ಣನವರ ಬಣ್ಣಿಸಿದರು.ತಾಲೂಕಿನ ಕಾಗಿನೆಲೆ ಮಹಾಸಂಸ್ಥಾನ ಕನಕಗುರು ಪೀಠದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ‘ಭಕ್ತಶ್ರೇಷ್ಠ ಕನಕದಾಸರ ಜಯಂತ್ಯುತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.