ವಿಶ್ವ ಏಡ್ಸ್ ದಿನ: ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಿವಿಶ್ವ ಏಡ್ಸ್ ದಿನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ವಿಶೇಷವಾಗಿ ಆಚರಣೆ ಮಾಡಬೇಕು. ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತಗೊಳಿಸದೇ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಿಶೇಷ ಚಟುವಟಿಕೆ, ಉಪನ್ಯಾಸ, ಎಚ್.ಐ.ವಿ. ಏಡ್ಸ್ ಕುರಿತು ಅರಿವು, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.