ವಿದ್ಯುತ್ ಮಿತ ಬಳಕೆಗಾಗಿ ಜಾಗೃತಿ ಮೂಡಿಸಿಮಳೆ ಕೊರತೆಯಿಂದಾಗಿ ರಾಜ್ಯಾದ್ಯಂತ ವಿದ್ಯುತ್ ಕೊರತೆ ಉಂಟಾಗಿದ್ದು, ವಿದ್ಯುತ್ ಮಿತ ಬಳಕೆಗಾಗಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು. ಹಾನಗಲ್ಲದಲ್ಲಿ ತಾಪಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತೀವ್ರ ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆ ಕುಸಿದಿದ್ದು, ಇಂಥ ಸಂದಿಗ್ಧ ಸಂದರ್ಭದಲ್ಲಿ ವಿದ್ಯುತ್ ಪೋಲಾಗುವುದನ್ನು ತಡೆಗಟ್ಟಬೇಕಿದೆ ಎಂದರು.