ಆಸ್ಪತ್ರೆ ಸಿಬ್ಬಂದಿಗೆ ಸಮಯ ಪಾಲನೆ ಪಾಠ ಮಾಡಿದ ಮಾನೆಶಾಸಕ ಶ್ರೀನಿವಾಸ ಮಾನೆ ಶುಕ್ರವಾರ ಬೆಳಗ್ಗೆ ಹಾನಗಲ್ಲ ತಾಲೂಕಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಮಯ ಪಾಲಿಸದ, ಗೈರು ಹಾಜರಿದ್ದ ಅಧಿಕಾರಿಗಳು, ಸಿಬ್ಬಂದಿಗೆ ಸಮಯ ಪಾಲನೆ ಮತ್ತು ಕರ್ತವ್ಯದ ಪಾಠ ಮಾಡಿದರು. ಸಮಯ ೧೦.೩೦ ಗಂಟೆಯಾದರೂ ಹಲವು ವೈದ್ಯರು, ತಜ್ಞರು ಕರ್ತವ್ಯಕ್ಕೆ ಹಾಜರಾಗದಿರುವುದನ್ನು ಗಮನಿಸಿ, ಕಾರಣ ಕೇಳಿ ನೋಟಿಸ್ ನೀಡುವಂತೆ ಆಡಳಿತ ವೈದ್ಯಾಧಿಕಾರಿ ಡಾ. ಮಾರುತಿ ಚಿಕ್ಕಣ್ಣನವರ ಅವರಿಗೆ ಸೂಚಿಸಿದರು.