ಎಸ್ಸಿ, ಎಸ್ಟಿ ಅಭಿವೃದ್ಧಿಗೆ ಮಾತ್ರ ಮೀಸಲು ಅನುದಾನ ಬಳಸಿಅನುಸೂಚಿತ ಜಾತಿ, ಬುಡಕಟ್ಟು ಉಪ ಯೋಜನೆಯಡಿ ಕಾಮಗಾರಿ ಕೈಗೊಳ್ಳುವಾಗ ಕನಿಷ್ಠ ಶೇ.೫೦ ಪ್ರಮಾಣಕ್ಕಿಂತ ಹೆಚ್ಚು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳು ವಾಸಿಸುವ ವಾರ್ಡುಗಳು, ಓಣಿಗಳಲ್ಲಿ ಮಾತ್ರ ಅಭಿವೃದ್ಧಿ ಕಾಮಗಾರಿ ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಿ ನಿಯಮಾನುಸಾರ ಕಾಮಗಾರಿ ಅನುಷ್ಠಾನಗೊಳಿಸಲು ವಿವಿಧ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.