ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಕೈ ಗೆಲುವು: ಎಚ್.ಕೆ. ಪಾಟೀಲಕನ್ನಡಪ್ರಭ ವಾರ್ತೆ ಹಾವೇರಿಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಶಾಲಿಯಾಗಿದ್ದು, ಹಾವೇರಿ ಸೇರಿ ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಕಾನೂನು ಸಂಸದೀಯ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಜನರ ವಿಶ್ವಾಸಗಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಸರ್ವಾನುಮತದ ಒಗ್ಗಟ್ಟಿನ ಮಂತ್ರ ಪಕ್ಷವನ್ನು ಗೆಲ್ಲಿಸುತ್ತದೆ. ಮೋದಿ ಅವರಿಗೆ ನಮ್ಮ ರಾಜ್ಯದಲ್ಲಿ ಸುಳ್ಳು ಹೇಳಿ ಒಲಿಸಿಕೊಳ್ಳಲು ಸಾಧ್ಯವಾಗಲಿಲ್ಲ, ಮಹಾ ಸುಳ್ಳು ಹೇಳುವ ಮೋದಿ ಅವರನ್ನು ಈ ಸಾರಿ ಚುನಾವಣೆಯಲ್ಲಿ ಜನತೆ ಕೆಳಗಿಳಿಸಲಿದ್ದಾರೆ ಎಂದರು.