ಹುಬ್ಬಳ್ಳಿ ಸಿದ್ಧಾರೂಢ ಮಠದಲ್ಲಿ ರಾಜ್ಯ ಮಟ್ಟದ ಭಜನಾ ಸ್ಪರ್ಧೆಜಗದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಜಯಂತ್ಯುತ್ಸವದ ಅಂಗವಾಗಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ಏ. ೧೦ರಿಂದ ಏ. ೧೫ರ ವರೆಗೆ ರಾಜ್ಯಮಟ್ಟದ ೯ನೇ ವರ್ಷದ ಭಜನಾ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ರಾಜ್ಯಮಟ್ಟದ ಭಜನಾ ಸ್ಪರ್ಧೆಯ ಅಧ್ಯಕ್ಷ, ಶ್ರೀಮಠದ ಧರ್ಮದರ್ಶಿ ಶಾಮಾನಂದ ಪೂಜೇರಿ ತಿಳಿಸಿದರು.