ರಾತ್ರಿ ಸುರಿದ ಮಳೆಗೆ ತಗ್ಗು ಪ್ರದೇಶಗಳು ಜಲಾವೃತ, ನೆಲಕ್ಕುರುಳಿದ ಮರಭಾನುವಾರ ತಡರಾತ್ರಿ ತಾಲೂಕಿನಾದ್ಯಂತ ಗುಡುಗು ಮಿಂಚು ಸಹಿತ ಸುರಿದ ಮಳೆ-ಗಾಳಿಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಗಾಳಿಯ ವೇಗಕ್ಕೆ ಲಕಮಾಜಿಕೊಪ್ಪ ಗ್ರಾಮದಲ್ಲಿ ಮರವೊಂದು ನೆಲಕ್ಕುರುಳಿದ್ದು, ಮನೆಯಲ್ಲಿ ಮಲಗಿದ್ದ ಮೂವರು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.