• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರಿನ ಸಮಸ್ಯೆ, ಮೇವಿನ ದಾಸ್ತಾನಿನ ವಸ್ತುಸ್ಥಿತಿ ವರದಿ ಕೊಡಿ
ಬರ ನಿರ್ವಹಣೆ ಕುರಿತಂತೆ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಸ್ಥಿತಿಗತಿಗಳ ಕುರಿತಂತೆ ಗ್ರಾಮವಾರು ಮಾಹಿತಿ ಸಂಗ್ರಹಿಸಲು ನೇಮಕಗೊಂಡ ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳು ಗ್ರಾಮವಾರು ವಸ್ತುಸ್ಥಿತಿಯ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು. ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವರ್ಷದೊಳಗೆ ೧೩,೫೦೦ಕ್ಕೂ ಅಧಿಕ ಕುಟುಂಬಗಳಿಗೆ ಪಟ್ಟಾ
ಹಾನಗಲ್ಲ ತಾಲೂಕಿನಲ್ಲಿ ಹಲವು ಸಮಸ್ಯೆಗಳು ಬಹಳ ವರ್ಷಗಳಿಂದ ಪರಿಹಾರ ಕಾಣದೇ ಸಮಸ್ಯೆಗಳಾಗಿಯೇ ಉಳಿದಿವೆ. ಅಂಥ ಸಮಸ್ಯೆಗಳ ಪರಿಹಾರಕ್ಕೆ ಗಮನ ಹರಿಸಲಾಗಿದೆ. ಹೊಸ ಕಂದಾಯ ಗ್ರಾಮ, ಉಪ ಗ್ರಾಮಗಳನ್ನು ರಚಿಸಿ ವರ್ಷದೊಳಗೆ ೧೩,೫೦೦ಕ್ಕೂ ಅಧಿಕ ಕುಟುಂಬಗಳಿಗೆ ಪಟ್ಟಾ ಕೊಡುವ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. ಹಾನಗಲ್ಲದ ಜನಸಂಪರ್ಕ ಕಚೇರಿಯಲ್ಲಿ ನಡೆದ ಅಕ್ಕಿಆಲೂರು ಬ್ಲಾಕ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅನುದಾನ ದುರುಪಯೋಗ ಕುರಿತು ತನಿಖೆಯಾಗಲಿ
ಮುಜರಾಯಿ ಇಲಾಖೆಯಿಂದ ಪಟ್ಟಣದ ಮುಪ್ಪಿನೇಶ್ವರ ವಿರಕ್ತಮಠಕ್ಕೆ ಬಿಡುಗಡೆಯಾದ ಹಣವನ್ನು ಆಡಳಿತ ಮಂಡಳಿ ದುರುಪಯೋಗಪಡಿಸಿಕೊಂಡಿದ್ದು, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ವಕೀಲ ಸುರೇಶ ಛಲವಾದಿ ನೇತೃತ್ವದಲ್ಲಿ ಪಟ್ಟಣದ ಸಾರ್ವಜನಿಕರು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಪ್ರದೀಪ ಜಾಧವ ಮಾತನಾಡಿ, ಮಠದ ಚಾರಿತ್ರ್ಯಕ್ಕೆ ಧಕ್ಕೆ ತಂದಿರುವ ಆಡಳಿತ ಮಂಡಳಿ ವಿರುದ್ಧ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಬೇಕು. ಇಲ್ಲದಿದ್ದಲ್ಲಿ ಶ್ರೀಮಠದ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದರು.
ವಿದೇಶ ತರಕಾರಿ ಬೆಳೆವ ರೈತಗೆ ನೆರವು
ವಿದೇಶಿ ತರಕಾರಿ, ಸೊಪ್ಪುಗಳನ್ನು ಬೆಳೆದು ತೊಂದರೆ ಸಿಲುಕಿದ್ದ ರೈತರೊಬ್ಬರು ಅಧಿಕಾರಿಗಳು ಹಾಗೂ ರೈತ ಉತ್ಪಾದಕ ಕಂಪನಿ ನೆರವಿನಿಂದ ಮತ್ತೆ ಯಶಸ್ಸಿನ ಹಾದಿಗೆ ಬಂದಿದ್ದಾರೆ. ಶಿಗ್ಗಾಂವಿ ತಾಲೂಕಿನ ಮುನವಳ್ಳಿ ಗ್ರಾಮದ ಶಂಭುಲಿಂಗಪ್ಪ ಗು. ಮಡ್ಲಿ ಎಂಬ ರೈತ ತನ್ನ ೪.೪ ಎಕರೆ ಹೊಲದಲ್ಲಿ ೨೦೧೫ರಿಂದ ವಿದೇಶಿ ತರಕಾರಿ, ಸೊಪ್ಪುಗಳನ್ನು ಬೆಳೆಯುತ್ತಿದ್ದರು. ಆದರೆ ಕೊರೋನಾ ಸಂದರ್ಭದಲ್ಲಿ ತೀವ್ರ ತೊಂದರೆಗೆ ಸಿಲುಕಿದರು. ಈಗ ಶಂಭುಲಿಂಗಪ್ಪ ಆರ್ಥಿಕವಾಗಿ ಚೇತರಿಸಿಕೊಂಡಿದ್ದು, ಉತ್ತಮ ಮಾರುಕಟ್ಟೆ ಕಂಡುಕೊಂಡಿದ್ದಾರೆ.
15 ದಿನದಲ್ಲಿ ಹಕ್ಕುಪತ್ರ ನೀಡದಿದ್ದರೆ ಪ್ರತಿಭಟನೆ
15 ದಿನಗಳ ಒಳಗೆ ತಮಗೆ ಹಕ್ಕುಪತ್ರ ನೀಡದಿದ್ದರೆ ಪ್ರತಿಭಟನೆ ನಡೆಸುವುದಾಗಿ ಸವಣೂರು ಪಟ್ಟಣದ ದಂಡಿನಪೇಟೆ ವ್ಯಾಪ್ತಿಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ತಾಲೂಕು ದಂಡಾಧಿಕಾರಿ ಮೂಲಕ ಕಂದಾಯ ಸಚಿವ ಕೃಷ್ಣೇಬೈರೇಗೌಡ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಅಲ್ಲಿನ ಕೆಲವು ವ್ಯಕ್ತಿಗಳು ಕಾಂಪೌಂಡ್‌ ಗೋಡೆ ನಿರ್ಮಿಸಿದ್ದಾರೆ. ಅದರಿಂದ ಅಲ್ಲಿಯ ನಿವಾಸಿಗಳಿಗೆ ತೊಂದರೆಯಾಗಿದೆ. ತಾಲೂಕು ದಂಡಾಧಿಕಾರಿ ಸ್ಥಳ ಪರಿಶೀಲನೆ ಮಾಡಿ ಜಿಲ್ಲಾಧಿಕಾರಿಗೆ ಸರಿಯಾದ ಮಾಹಿತಿ ನೀಡಬೇಕು. ಅಲ್ಲಿನ ನಿವಾಸಿಗಳಿಗೆ ತೊಂದರೆ ಆಗದಂತೆ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ.
ಎಕರೆಗೆ ₹೨೫ ಸಾವಿರ ಬರ ಪರಿಹಾರ ನೀಡಲು ಒತ್ತಾಯ
ತೀವ್ರ ಬರ ಎದುರಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಎಕರೆ ₹25 ಸಾವಿರದಂತೆ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಆಗ್ರಹಿಸಿದರು. ಗುರುವಾರ ಹಿರೇಕೆರೂರು ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ಹಿರೇಕೆರೂರು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಶತಮಾನದಲ್ಲಿ ಕಂಡರಿಯದ ಭೀಕರ ಬರಗಾಲಕ್ಕೆ ರೈತರು ತುತ್ತಾಗಿದ್ದಾರೆ. ಈ ಬಾರಿ ಮುಂಗಾರು ಹಾಗೂ ಹಿಂಗಾರು ಸಂಪೂರ್ಣ ಕೈ ಕೊಟ್ಟಿದೆ. ಮಳೆ ಕೈ ಕೊಟ್ಟ ಪರಿಣಾಮ ಸಾಲ ಮಾಡಿದ ರೈತರು ಕಂಗಾಲಾಗಿದ್ದಾರೆ. ಸರ್ಕಾರ ರೈತರಿಗೆ ಪರಿಹಾರ ಕೊಡುವುದು ನ್ಯಾಯಸಮ್ಮತವಾಗಿದೆ ಎಂದರು.
ಸಮಾಜದ ಸಮಸ್ಯೆ ಸಮಾಲೋಚನೆಗಾಗಿ ವಾಲ್ಮೀಕಿ ಜಾಗೃತಿ ಜಾತ್ರೆ
ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆ. ೮ ಮತ್ತು ೯ರಂದು ಮಹರ್ಷಿ ವಾಲ್ಮೀಕಿ ಜಾಗೃತಿ ಜಾತ್ರೆ ಆಯೋಜಿಸಲಾಗಿದೆ. ನಕಲಿ ಜಾತಿ ಪ್ರಮಾಣ ಪತ್ರ ಸೇರಿದಂತೆ ಸಮಾಜವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸುವ ಮೂಲಕ ಈ ಜಾತ್ರೆಯಲ್ಲಿ ಸಮಾಜ ಬಾಂಧವರಲ್ಲಿ ಅರಿವು ಮೂಡಿಸಲಾಗುವುದು ಎಂದು ಮಹರ್ಷಿ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು. ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಮಹರ್ಷಿ ವಾಲ್ಮೀಕಿ ಜಾತ್ರೆ-೨೦೨೪ರ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಕೃಷಿ ತಳಿ ಸಂಶೋಧನೆ, ಆಹಾರ ಸಂಸ್ಕರಣಾ ಘಟಕ ಸ್ಥಾಪನೆಗೆ ಉತ್ತೇಜನ ನೀಡಿ
ಕೃಷಿ ತಳಿ ಸಂಶೋಧನಾ ಚಟುವಟಿಕೆ ಹಾಗೂ ಮೆಣಸಿನಕಾಯಿ, ಮೆಕ್ಕೆಜೋಳ ಹಾಗೂ ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಆಧಾರಿತ ಸಣ್ಣ ಕೈಗಾರಿಕಾ ಘಟಕಗಳು ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆರಂಭಿಸುವ ಕುರಿತಂತೆ ರೈತರಿಗೆ ಹಾಗೂ ಬಂಡವಾಳ ಹೂಡಿಕೆದಾರರಿಗೆ ಉತ್ತೇಜಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದ್ದಾರೆ. ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಪ್ರಧಾನ ಹಾವೇರಿ ಜಿಲ್ಲೆಯಲ್ಲಿ ಕೃಷಿ ಆಧಾರಿತ ಆಹಾರ ಸಂಸ್ಕರಣೆ, ತಳಿ ಅಭಿವೃದ್ಧಿಯಂತಹ ಚಟುವಟಿಕೆಗೆ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಸೂಕ್ತ ಯೋಜನೆ ರೂಪಿಸಲು ಸೂಚನೆ ನೀಡಿದ್ದಾರೆ.
ಸರ್ಕಾರ ಹಠ ಬಿಟ್ಟು ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲಿ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕಳೆದ 20 ದಿನಗಳಿಂದ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸಿ ತ್ವರಿತವಾಗಿ ತರಗತಿಗಳನ್ನು ನಡೆಸಬೇಕು ಎಂದು ಆಗ್ರಹಿಸಿ ಮಂಗಳವಾರ ಎಸ್‌ಎಫ್‌ಐ ತಾಲೂಕು ಘಟಕದ ನೇತೃತ್ವದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಾಚಾರ್ಯ ಎಸ್.ಕೆ. ಪಾಟೀಲ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಸಂಸದನ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್ ಸಂಸದ ಧೀರಜ್ ಸಾಹು ಅವರ ಭ್ರಷ್ಟಾಚಾರ ಹಾಗೂ ಅವರನ್ನು ಬೆಂಬಲಿಸಿರುವ ಕಾಂಗ್ರೆಸ್‌ನ ಬ್ರಹ್ಮಾಂಡ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಮಂಗಳವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಬಿಜೆಪಿ ಕಾರ್ಯಾಲಯದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಿ.ಬಿ. ರೋಡ್ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಗೆ ಆಗಮಿಸಿತು. ನಂತರ ಕೆಲಹೊತ್ತು ರಸ್ತೆ ತಡೆ ಮಾಡುವ ಮೂಲಕ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 462
  • 463
  • 464
  • 465
  • 466
  • 467
  • 468
  • 469
  • 470
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved