• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿಸಿಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಿ
ಕಡಿಮೆ ಸಾಮರ್ಥ್ಯದ ವಿದ್ಯುತ್ ಪರಿವರ್ತಕಗಳನ್ನು ಅವಶ್ಯಕತೆಗೆ ಅನುಗುಣವಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ನೀಡುವಂತೆ ಶಾಸಕ ಶ್ರೀನಿವಾಸ ಮಾನೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾನಗಲ್ಲದ ಹೆಸ್ಕಾಂ ಮತ್ತು ಕೆಪಿಟಿಸಿಎಲ್‌ನ ಹಿರಿಯ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದ್ದಾರೆ. ವಿದ್ಯುತ್ ಪರಿವರ್ತಕಗಳ ದುರಸ್ತಿ ಕಾರ್ಯ ಚುರುಕುಗೊಳಿಸಬೇಕು. ಶಾಲಾ ಮಕ್ಕಳು ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಳಜಿ ವಹಿಸಬೇಕು ಎಂದು ಸೂಚಿಸಿದ್ದಾರೆ.
ಕುಡಿವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರ ವಹಿಸಿ
ಗ್ರಾಪಂ ವಂತಿಕೆ ಹಣದಿಂದ ಬರ ನಿರ್ವಹಣೆ ಮಾಡಬೇಕು. ನೀರಿನ ಸಮಸ್ಯೆ ಉದ್ಭವಿಸದಂತೆ ಅಧಿಕಾರಿಗಳು ಎಚ್ಚರವಹಿಸಬೇಕು, ನಿರ್ಲಕ್ಷ್ಯ ಮಾಡಬಾರದು ಎಂದು ಶಾಸಕ ಬಸವರಾಜ ಶಿವಣ್ಣನವರ ಸೂಚಿಸಿದರು. ಬ್ಯಾಡಗಿ ಪಟ್ಟಣದ ತಾಪಂ ಸುವರ್ಣ ಸೌಧದಲ್ಲಿ ಶನಿವಾರ ಜರುಗಿದ ಬರಗಾಲದ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು. ಕೇವಲ ಸರ್ಕಾರದ ಹಾಗೂ ಶಾಸಕರ ಕೆಲಸ ಮಾತ್ರವಲ್ಲ, ಸರ್ಕಾರದ ಕಡೆಗೆ ಬೊಟ್ಟು ಮಾಡಿ ತೋರಿಸದೇ ಸರ್ವ ಸದಸ್ಯರು, ಅಧ್ಯಕ್ಷರು, ಉಪಾಧ್ಯಕ್ಷರು ಪಿಡಿಒಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಬಿಸಿಯೂಟ ಯೋಜನೆ ಖಾಸಗೀಕರಣ ಹುನ್ನಾರ ಖಂಡಿಸಿ ಪ್ರತಿಭಟನೆ
ಬಿಸಿಯೂಟ ಯೋಜನೆ ಖಾಸಗೀಕರಣದ ಹುನ್ನಾರ ಖಂಡಿಸಿ, ಬಿಸಿಯೂಟ ತಯಾರಕರಿಗೆ ಸೇವಾ ಭದ್ರತೆ ಒದಗಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬಿಸಿಯೂಟ ಕಾರ್ಯಕರ್ತೆಯರು ಹಾವೇರಿ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು. ಸಂಘಟನೆಯ ರಾಜ್ಯಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ ಮೊದಲಾದ ಪ್ರಮುಖರು ಪಾಲ್ಗೊಂಡು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ಕಲಬುರ್ಗಿಯಲ್ಲಿ ವಕೀಲರ ಹತ್ಯೆ ಖಂಡಿಸಿ ವಕೀಲರ ಪ್ರತಿಭಟನೆ
ಕಲಬುರ್ಗಿಯಲ್ಲಿ ನಡೆದ ವಕೀಲರ ಹತ್ಯೆಯನ್ನು ಖಂಡಿಸಿ ಪಟ್ಟಣದಲ್ಲಿ ನ್ಯಾಯವಾದಿಗಳ ಸಂಘದ ಸದಸ್ಯರು ಕಾರ‍್ಯಕಲಾಪ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದರು. ಆನಂತರ ತಪ್ಪಿತಸ್ಥರನ್ನು ಬಂಧಿಸುವಂತೆ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಹತ್ಯೆ ಖಂಡಿಸಿದ ಬ್ಯಾಡಗಿ ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು, ನ್ಯಾಯವಾದಿಗಳ ಹಿತರಕ್ಷಣಾ ಕಾಯಿದೆ ಜಾರಿ ಮಾಡುವಂತೆ ಆಗ್ರಹಿಸಿದರು.
ಹಿರೇಕೆರೂರಲ್ಲಿ ಹೆಚ್ಚಿದ ಬೀದಿ ನಾಯಿ ಹಾವಳಿ
ಹಿರೇಕೆರೂರು ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಜನರು ಓಡಾಡಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಚಿಕ್ಕಮಕ್ಕಳನ್ನು ಕರೆದೊಯ್ಯುವುದಕ್ಕೆ ಜನರು ಅಂಜುತ್ತಿದ್ದಾರೆ. ಈಗಾಗಲೇ ಹಲವು ಬಾರಿ ಜನರು ಪಪಂಗೆ ಮೌಖಿಕವಾಗಿ ದೂರು ನೀಡಿದ್ದಾರೆ. ಆದರೆ ಯಾವುದೇ ಕ್ರಮವಾಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ನಾಯಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಬೆಳಗ್ಗೆ ವಾಯು ವಿಹಾರಕ್ಕೆ ತೆರಳುವ ಜನತೆಯ ಮೇಲೂ ನಾಯಿಗಳು ಎರಗಿ ಗಾಯಗೊಳಿಸಿದ ಘಟನೆಗಳು ನಡೆದಿವೆ.
ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಆಗ್ರಹ
ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಕಾರ್ಯಕರ್ತರು ಹಾವೇರಿ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು. ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಲು ನಿರ್ಣಯ ಕೈಗೊಳ್ಳಬೇಕು. ಇಲ್ಲದೇ ಹೋದಲ್ಲಿ ಕಾರ್ಯಕರ್ತರ ಜತೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಆಗ್ರಹ
ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಕಾರ್ಯಕರ್ತರು ಹಾವೇರಿ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು. ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಡಾ. ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಲು ನಿರ್ಣಯ ಕೈಗೊಳ್ಳಬೇಕು. ಇಲ್ಲದೇ ಹೋದಲ್ಲಿ ಕಾರ್ಯಕರ್ತರ ಜತೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಕ್ರೀಡಾನಿಧಿ ₹ 3ರಿಂದ 5 ಲಕ್ಷಕ್ಕೆ ಹೆಚ್ಚಳ
ಇಲ್ಲಿನ ಪುರಸಭೆಯ ಸಭಾಭವನದಲ್ಲಿ ಆಡಳಿತಾಧಿಕಾರಿ ಎಚ್.ಬಿ. ಚನ್ನಪ್ಪ ಅಧ್ಯಕ್ಷತೆಯಲ್ಲಿ ಪುರಸಭೆಯ 2024-25ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯ ನಡೆಯಿತು.ಕ್ರೀಡಾನಿಧಿ ₹ 3ರಿಂದ 5 ಲಕ್ಷಕ್ಕೆ ಹೆಚ್ಚಳ ಸೇರಿದಂತೆ ಪುರಸಭೆಯ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದ ವಾಣಿಜ್ಯ, ವಾಣಿಜ್ಯೇತರ ಮತ್ತು ಕೈಗಾರಿಕೆ (ಕೋಲ್ಡ್ ಸ್ಟೋರೇಜ್, ಪೌಡರ್ ಫ್ಯಾಕ್ಟರಿ) ಕಟ್ಟಡ ಸಹಿತ ನಿವೇಶನಗಳಿಗೆ ತೆರಿಗೆ ಆಕರಣೆ, ವಾಣಿಜ್ಯ ಮಳಿಗೆಗಳ ಬಾಡಿಗೆ ಕಡ್ಡಾಯ ವಸೂಲಿ ಮಾಡುವ ಮೂಲಕ ಪಟ್ಟಣದ ಅಭಿವೃದ್ಧಿ ಕೆಲಸಗಳಿಗೆ ಹಣಕಾಸಿನ ಕೊರತೆ ಆಗದಂತೆ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಯಿತು.
ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲದು
ಹೆದ್ದಾರಿಗಳಲ್ಲಿ ಲಿಂಗ ಪೂಜೆಯ ಮೂಲಕ 4ನೇ ಹಂತದ ಹೋರಾಟವನ್ನೂ ಪ್ರಾರಂಭಿಸಲಾಗಿದೆ. ಸರ್ಕಾರ ಯಾವುದೇ ಇರಲಿ, ಮುಖ್ಯಮಂತ್ರಿಗಳು ಯಾರೇ ಆಗಲಿ ಆದರೆ ನಮ್ಮ ನಿರ್ಧಾರ ಅಚಲವಾಗಿದ್ದು ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲದು ಎಂದು ಪಂಚಮಸಾಲಿ ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಅಕ್ಷರ ಜ್ಞಾನಕ್ಕೆ ಭವಿಷ್ಯ ರೂಪಿಸುವ ಶಕ್ತಿ ಇದೆ
ಶಿಕ್ಷಣದ ಪ್ರಾಮುಖ್ಯತೆ ಬಗೆಗೆ ಪ್ರತಿಯೊಬ್ಬರಲ್ಲಿಯೂ ಸಹ ಅರಿವು ಮೂಡುತ್ತಿದೆ. ಕಷ್ಟ ಇದ್ದರೂ ಸಹ ಪೋಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಕಾಳಜಿ ವಹಿಸಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಶಾಲೆ, ಕಾಲೇಜು, ವಸತಿ ನಿಲಯ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಅನಿವಾರ್ಯತೆ ಸೃಷ್ಟಿಯಾಗಿದ್ದು, ಈ ನಿಟ್ಟಿನಲ್ಲಿ ಗಮನ ಹರಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
  • < previous
  • 1
  • ...
  • 464
  • 465
  • 466
  • 467
  • 468
  • 469
  • 470
  • 471
  • 472
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved