ಕೃಷಿ ಕಾಯ್ದೆ ವಾಪಸ್‌ಗೆ ಒತ್ತಾಯಿಸಿ ಸುವರ್ಣಸೌಧ ಮುತ್ತಿಗೆಕೃಷಿ ಕಾಯ್ದೆ ವಾಪಸ್‌ಗೆ ಒತ್ತಾಯಿಸಿ ಹಾಗೂ ರೈತರು, ಕೃಷಿ ಕ್ಷೇತ್ರ ನಿರ್ಲಕ್ಷ್ಯ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬೆಳಗಾವಿ ಅಧಿವೇಶನದ ವೇಳೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ ರೈತರಿಗಾಗಿ ಯಾವುದೇ ಕಾರ್ಯಕ್ರಮ ಹಾಕಿಕೊಂಡಿಲ್ಲ. ಬರಗಾಲದಿಂದ ರೈತರ ಆರ್ಥಿಕ ಸ್ಥಿತಿ ಚಿಂತಾಜನಕವಾಗಿದೆ ಎಂದು ಆರೋಪಿಸಿದರು.