• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ಮಹಾಪಂಚಾಯತ್ ಅಧಿವೇಶನ
ಬರಗಾಲದಿಂದ ಸಂಕಷ್ಟದಲ್ಲಿರುವ ರಾಜ್ಯದ ರೈತರ ಸಾಲಮನ್ನಾ ಮಾಡಲು ಒತ್ತಾಯಿಸಲು ಬೆಂಗಳೂರಿನಲ್ಲಿ ಡಿ.೨೩ರಂದು ರಾಷ್ಟ್ರೀಯ ಕಿಸಾನ್ ಮಹಾಪಂಚಾಯತ್ ಅಧಿವೇಶನ ಹಮ್ಮಿಕೊಳ್ಳಲಾಗಿದೆ.ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರ ಶಾಂತಕುಮಾರ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ನೆರವಿಗೆ ಬಾರದೆ ರಾಜಕೀಯ ಚೆಲ್ಲಾಟವಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕೇಂದ್ರದಲ್ಲಿ ಹೆಚ್ಚುತ್ತಿದೆ ಶ್ವಾನಗಳ ಹಾವಳಿ
ಜಿಲ್ಲಾ ಕೇಂದ್ರ ಹಾವೇರಿಯಲ್ಲಿ ಬೀದಿ ನಾಯಿಗಳ ಕಾಟ ವಿಪರೀತವಾಗಿದ್ದು, ಯಾವ ರಸ್ತೆ, ಓಣಿಗಳಲ್ಲಿ ಹೋದರೂ ಹತ್ತಾರು ನಾಯಿಗಳ ಹಿಂಡೇ ಬೆನ್ನಟ್ಟಿ ಬರುತ್ತವೆ. ಇಷ್ಟಾದರೂ ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ. ನಗರದ ಬಸ್‌ ನಿಲ್ದಾಣ ಸುತ್ತಮುತ್ತ, ಪಿಬಿ ರಸ್ತೆ, ಹಾನಗಲ್ಲ ರಸ್ತೆ, ಸುಭಾಸ ಸರ್ಕಲ್‌, ಬಸವೇಶ್ವರನಗರ, ರೈಲ್ವೆ ಸ್ಟೇಶನ್‌ ರಸ್ತೆ ಹೀಗೆ ಯಾವ ರಸ್ತೆ, ಓಣಿಗಳಿಗೆ ಹೋದರೂ ನಾಯಿಗಳ ಹಿಂಡೇ ಕಾಣುತ್ತವೆ. ಕೆಲವು ಕಡೆ ನಾಲ್ಕಾರು ನಾಯಿಗಳಿದ್ದರೆ, ಇನ್ನು ಕೆಲವು ಕಡೆಗಳ್ಲಲಂತೂ 15ರಿಂದ 20ರಷ್ಟು ಶ್ವಾನಗಳು ಗುಂಪಾಗಿರುತ್ತವೆ. ಹಗಲಿನ ವೇಳೆ ಅಲ್ಲಲ್ಲಿ ಮಲಗಿರುವ ನಾಯಿಗಳು, ರಾತ್ರಿ ವೇಳೆ ಹಾಗೂ ನಸುಕಿನಲ್ಲಿ ಅಪಾಯಕಾರಿ ರೀತಿಯಲ್ಲಿ ವರ್ತಿಸುತ್ತವೆ.
ಮೂಲಸೌಕರ್ಯಗಳಿಲ್ಲದೇ ಬಾಗಿಲು ಮುಚ್ಚಿದ ಸಣ್ಣ ಕೈಗಾರಿಕೆಗಳು
ಕೆಎಸ್‌ಎಸ್‌ಐಡಿಸಿ (ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ)ಯ ದಿವ್ಯ ನಿರ್ಲಕ್ಷದಿಂದ ಪಟ್ಟಣದ ಮಾಸೂರು ರಸ್ತೆಯ ಪಕ್ಕದಲ್ಲಿರುವ ಕೈಗಾರಿಕೆ ಪ್ರದೇಶದಲ್ಲಿ ಮೂಲ ಸೌರ್ಕಯಗಳ ಕೊರತೆಯಿಂದ ಕೆಲವು ಸಣ್ಣ ಕೈಗಾರಿಕೆಗಳು ಬಾಗಿಲು ಮುಚ್ಚಿವೆ.೧೯೮೩-೮೪ರಲ್ಲಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರು ಗ್ರಾಮೀಣ ಪ್ರದೇಶದಲ್ಲಿ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಕರ್ನಾಟಕ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಸ್ಥಾಪಿಸಿದರು. ಈ ಮೂಲಕ ಪಟ್ಟಣದಲ್ಲಿ ನಿಗಮದ ಶಾಖೆಯನ್ನು ಆರಂಭಿಸಲಾಗಿತ್ತು.
ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡಾ ಚಟುವಟಿಕೆ ಸಹಕಾರಿ
ಸಮಾಜದ ನೆಮ್ಮದಿಗಾಗಿ ಹಗಲಿರುಳು ಕೆಲಸ ಮಾಡುವ ಪೊಲೀಸರು ದೈಹಿಕ ಮತ್ತು ಮಾನಸಿಕ ಸದೃಢತೆ ಕಾಯ್ದುಕೊಳ್ಳುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಹೇಳಿದರು. ಕೆರೆಮತ್ತಿಹಳ್ಳಿ ಡಿಎಆರ್ ಕವಾಯತ್ ಮೈದಾನದಲ್ಲಿ ಶುಕ್ರವಾರ ನಾಲ್ಕು ದಿನಗಳ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಹಾರಿಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಜನತಾ ದರ್ಶನದ ಮೂಲಕ ತಾಲೂಕು ಕೇಂದ್ರದಲ್ಲಿಯೇ ಪರಿಹಾರ ಲಭ್ಯ
ಜನರ ಸಮಸ್ಯೆಗಳನ್ನು ಹೊತ್ತು ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸುವುದನ್ನು ತಪ್ಪಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅವುಗಳಿಗೆ ಪರಿಹಾರ ಕಲ್ಪಿಸುವ ಚಿಂತನೆಯಿಂದ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು. ರಾಣಿಬೆನ್ನೂರು ನಗರದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ತಾಲೂಕು ಮತ್ತು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜನತಾ ದರ್ಶನದಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಕೆಲವು ಅರ್ಹ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಜಿಲ್ಲಾಧಿಕಾರಿ ಆದೇಶ ಪ್ರತಿ ವಿತರಿಸಿದರು.
26ರಂದು ಮೈಸೂರಿನಲ್ಲಿ ಗಿರಿಜನರ ಸಂಸ್ಕೃತಿ ಸಂರಕ್ಷಣಾ ಸಮಾವೇಶ
ಅನ್ಯ ಧರ್ಮಗಳಿಗೆ ಮತಾಂತರಗೊಂಡ ಗಿರಿಜನರು ನಮ್ಮ ಸೌಲಭ್ಯಗಳನ್ನು ಸರ್ಕಾರದಿಂದ ಅನುಭವಿಸುತ್ತಿದ್ದು, ಅವರನ್ನು ಪರಿಶಿಷ್ಟ ಪಂಗಡದಿಂದ ಕೈಬಿಡಬೇಕು, ಅದಕ್ಕಾಗಿ ಸಮುದಾಯದ ಸಂಘಟನೆಯ ಉದ್ದೇಶದಿಂದ ನ. ೨೬ರಂದು ಮೈಸೂರಿನಲ್ಲಿ ೨೫ ಸಾವಿರ ಗಿರಿಜನರ ಸಂಸ್ಕೃತಿ ಸಂರಕ್ಷಣಾ ಸಮಾವೇಶ ಕೈಗೊಂಡಿದ್ದೇವೆ ಎಂದು ವಿಧಾನಪರಿಷತ್‌ ಸದಸ್ಯ, ರಾಜ್ಯ ಗಿರಿಜನ ಸುರಕ್ಷಾ ವೇದಿಕೆ ನಿರ್ವಾಹಕ ವಿಸ್ವಸ್ಥ ಶಾಂತಾರಾಮ್ ಸಿದ್ದಿ ತಿಳಿಸಿದರು.
ಲಂಚಕ್ಕೆ ಬೇಡಿಕೆ, ಕಾನ್‌ಸ್ಟೇಬಲ್ ಅಮಾನತು
ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿದ್ದ ವಾಹನವನ್ನು ಮಾಲೀಕರಿಗೆ ನೀಡಲು ಪೊಲೀಸ್ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ಗುರುವಾರ ವೈರಲ್ ಆಗುತ್ತಿದ್ದಂತೆ ಸಂಬಂಧಪಟ್ಟ ಕಾನ್‌ಸ್ಟೇಬಲ್‌ನನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಆದೇಶಿಸಿದ್ದಾರೆ. ಪೊಲೀಸ್ ಕಾನ್‌ಸ್ಟೇಬಲ್ ರಮೇಶ ಭಜಂತ್ರಿ ಲಂಚ ಕೇಳಿದವರು. ಸಾಹೇಬ್ರಿಗೆ ₹ ೫ ಸಾವಿರ ಮತ್ತು ನನಗೆ ₹ ೨ ಸಾವಿರ ಕೊಡು ಎಂದು ಲಂಚ ಕೇಳಿರುವ ದೃಶ್ಯಾವಳಿ ವಿಡಿಯೋದಲ್ಲಿ ಸೆರೆಯಾಗಿದೆ.
ಬಸ್ ಪಾಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಪ್ರತಿಭಟನೆ
ಸಮೀಪದ ಗಾಂಧಿಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ವಿದ್ಯಾರ್ಥಿಗಳ ಬಸ್ ಪಾಸ್‌ಗಳನ್ನು ಹಾವೇರಿ ನಗರದವರೆಗೂ ವಿಸ್ತರಿಸುವಂತೆ ಒತ್ತಾಯಿಸಿ ಹಾಗೂ ಗ್ರಾಮೀಣ ಭಾಗದ ಬಸ್ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ವಿದ್ಯಾರ್ಥಿಗಳು ನಾಲ್ಕು ಗಂಟೆ ಕಾಲ ರಸ್ತೆತಡೆ ಮಾಡಿ ಗಾಂಧಿಪುರ ಕಾಲೇಜ್ ಎದುರು ಪ್ರತಿಭಟನೆ ನಡೆಸಿದರು.
ಕ್ಷೇತ್ರದಲ್ಲಿ ಭೀಕರ ಬರ, ವಿದೇಶ ಪ್ರವಾಸದಲ್ಲಿ ಶಾಸಕರು
ಕಾಂಗ್ರೆಸ್‌ ಶಾಸಕ ಪ್ರಕಾಶ ಕೋಳಿವಾಡ ತಮ್ಮ ವಿವಾಹ ವಾರ್ಷಿಕೋತ್ಸವ ನಿಮಿತ್ತ ವಿದೇಶ ಪ್ರವಾಸ ಕೈಗೊಂಡಿರುವುದು ಇದೀಗ ವಿವಾದಕ್ಕೀಡಾಗಿದೆ.ಭೀಕರ ಬರಗಾಲದಿಂದ ಸಂಕಷ್ಟದಲ್ಲಿರುವ ರೈತರೊಂದಿಗೆ ಇದ್ದು ಅಗತ್ಯ ನೆರವು ನೀಡುವ ಕಾರ್ಯ ಮಾಡಬೇಕಿದ್ದ ಕ್ಷೇತ್ರದ ಶಾಸಕರು ವಿದೇಶದಲ್ಲಿ ಸುತ್ತಾಡುತ್ತಿರುವುದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಾಸಕರು ಭೂತಾನ್ ಪ್ರವಾಸ ಕೈಗೊಂಡಿರುವುದು ಕ್ಷೇತ್ರದ ಜನರಲ್ಲಿ ಹಾಗೂ ರೈತರಲ್ಲಿ ಭಾರಿ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ರೈತರೊಬ್ಬರು ಬೈದು ಆಕ್ರೋಶ ವ್ಯಕ್ತಪಡಿಸಿರುವ ವೀಡಿಯೋ ವೈರಲ್ ಆಗಿದೆ.
ಕ್ಷೇತ್ರದಲ್ಲಿ ಭೀಕರ ಬರ, ವಿದೇಶ ಪ್ರವಾಸದಲ್ಲಿ ಶಾಸಕರು
ಕಾಂಗ್ರೆಸ್‌ ಶಾಸಕ ಪ್ರಕಾಶ ಕೋಳಿವಾಡ ತಮ್ಮ ವಿವಾಹ ವಾರ್ಷಿಕೋತ್ಸವ ನಿಮಿತ್ತ ವಿದೇಶ ಪ್ರವಾಸ ಕೈಗೊಂಡಿರುವುದು ಇದೀಗ ವಿವಾದಕ್ಕೀಡಾಗಿದೆ.ಭೀಕರ ಬರಗಾಲದಿಂದ ಸಂಕಷ್ಟದಲ್ಲಿರುವ ರೈತರೊಂದಿಗೆ ಇದ್ದು ಅಗತ್ಯ ನೆರವು ನೀಡುವ ಕಾರ್ಯ ಮಾಡಬೇಕಿದ್ದ ಕ್ಷೇತ್ರದ ಶಾಸಕರು ವಿದೇಶದಲ್ಲಿ ಸುತ್ತಾಡುತ್ತಿರುವುದು ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಾಸಕರು ಭೂತಾನ್ ಪ್ರವಾಸ ಕೈಗೊಂಡಿರುವುದು ಕ್ಷೇತ್ರದ ಜನರಲ್ಲಿ ಹಾಗೂ ರೈತರಲ್ಲಿ ಭಾರಿ ಆಕ್ರೋಶಕ್ಕೆ ಎಡೆ ಮಾಡಿಕೊಟ್ಟಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ರೈತರೊಬ್ಬರು ಬೈದು ಆಕ್ರೋಶ ವ್ಯಕ್ತಪಡಿಸಿರುವ ವೀಡಿಯೋ ವೈರಲ್ ಆಗಿದೆ.
  • < previous
  • 1
  • ...
  • 539
  • 540
  • 541
  • 542
  • 543
  • 544
  • 545
  • 546
  • 547
  • ...
  • 557
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved