ಮಕ್ಕಳಿಗೆ ಸಂಸ್ಕಾರ ನೀಡಿಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ಕೊಡಿ. ಅಂದಾಗ ಮಾತ್ರ ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲಿಷ್ಠವಾಗಲು ಸಾಧ್ಯ ಎಂದು ಕಾಗಿನೆಲೆ ಕನಕಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು. ತಾಲೂಕು ಕನಕ ನೌಕರರ ಸಂಘವು ಭಕ್ತ ಶ್ರೇಷ್ಠ ಕನಕದಾಸರ ೫೩೬ನೇ ಜಯಂತ್ಯುತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.