ನೂತನ ಏಳು ವಿವಿಗಳಲ್ಲಿ ಕೌಶಲ್ಯಾಧಾರಿತ ಕೋರ್ಸ್ ಆರಂಭರಾಜ್ಯದ ಏಳು ಹೊಸ ವಿಶ್ವವಿದ್ಯಾಲಯಗಳಲ್ಲಿ ಸಾಂಪ್ರದಾಯಿಕ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಬದಲಾಗಿ ಜ್ಞಾನ, ಆಧುನಿಕ ತಂತ್ರಜ್ಞಾನ, ಉದ್ಯೋಗ ಕೇಂದ್ರೀತ ಕೌಶಲ್ಯಾಧಾರಿತ ಮಾನವೀಯ ಮೌಲ್ಯಗಳ ಪಠ್ಯಕ್ರಮ ಅಳವಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಸುರೇಶ ಜಂಗಮಶೆಟ್ಟಿ ತಿಳಿಸಿದರು.