ಶೀಘ್ರದಲ್ಲಿಯೇ ಬೆಳೆಹಾನಿ ಪರಿಹಾರ ವಿತರಣೆ: ಸಚಿವ ಶಿವಾನಂದ ಪಾಟೀಲಬೆಳೆಹಾನಿ ಪರಿಹಾರ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಪರಿಹಾರ ವಿತರಣೆಗೆ ಹಣದ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ₹38 ಕೋಟಿ ಇದೆ. ಜಂಟಿ ಸಮೀಕ್ಷೆ ಪ್ರಗತಿಯಲ್ಲಿದ್ದು, ತ್ವರಿತವಾಗಿ ಪೂರ್ಣಗೊಳಿಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.