ಮದಗ ಮಾಸೂರು ಕೆರೆ ನಾಲೆ ಆಧುನೀಕರಣಕ್ಕೆ ₹52 ಕೋಟಿ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲಮಾಸೂರು ಗ್ರಾಮದ ಬಳಿ ಕುಮದ್ವತಿ ನದಿಗೆ ಅಡ್ಡಲಾಗಿ ಮದಗ- ಮಾಸೂರು ಕೆರೆ ಇದ್ದು, 14ನೇ ಶತಮಾನದಲ್ಲಿ ವಿಜಯನಗರ ಅರಸರ ಕಾಲದಲ್ಲಿ ಅಣೆಕಟ್ಟೆ ನಿರ್ಮಿಸಲಾಗಿದೆ. ಈ ಕೆರೆಯ ನೀರು ಸಂಗ್ರಹಣಾ ಸಾಮರ್ಥ್ಯ 0.056 ಟಿಎಂಸಿ ಇದ್ದು, 0.718 ಬಳಕೆಯೊಂದಿಗೆ 715 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ.