ಕನ್ನಡದ ಮನಸ್ಸುಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸುತ್ತೇನೆ-ಶಾಸಕ ಯಾಸೀರ ಅಹ್ಮದಖಾನ ಪಠಾಣಪಟ್ಟಣದಲ್ಲಿ ಫೆ.೧೧ರಂದು ೫ನೇ ಶಿಗ್ಗಾಂವಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ಆಯೋಜಿಸಲಾಗಿದ್ದು, ಕನ್ನಡ ಭಾಷೆ ಮತ್ತು ನಾಡಿನಬಗ್ಗೆ ಅಭಿಮಾನ ಹೊಂದಿದವರಾಗಿ ಶಿಗ್ಗಾಂವಿ-ಸವಣೂರ ಕ್ಷೇತ್ರವನ್ನೂ ಸೇರಿದಂತೆ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಆಶಿಸುತ್ತ ಕನ್ನಡದ ಮನಸ್ಸುಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸುತ್ತೇನೆ ಎಂದು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ, ಶಾಸಕ ಯಾಸೀರ ಅಹ್ಮದಖಾನ ಪಠಾಣ ಹೇಳಿದರು.