ಕ್ರಿಯಾಶೀಲ ಬದುಕು ಜೀವನ ಶ್ರೇಯಸ್ಸಿಗೆ ಮೂಲ-ರಂಭಾಪುರಿ ಸ್ವಾಮೀಜಿಚತುರ್ವಿಧ ಪುರುಷಾರ್ಥಗಳಾದ ಧರ್ಮ, ಅರ್ಥ, ಕಾಮ, ಮೋಕ್ಷ ಇವುಗಳಲ್ಲಿ ಒಂದನ್ನಾದರೂ ಜೀವನದಲ್ಲಿ ಸಾಧಿಸದಿದ್ದರೆ ಮಾನವ ಜೀವನ ವ್ಯರ್ಥ. ಐಹಿಕ ಭೋಗ ಭಾಗ್ಯಗಳನ್ನು ಬಯಸುವ ಮನುಷ್ಯ ಧರ್ಮದ ಪರಿಪಾಲನೆ ಮಾಡದಿದ್ದರೆ ಯಾವ ಪ್ರಯೋಜನವೂ ಇಲ್ಲ. ಕ್ರಿಯಾಶೀಲ ಬದುಕು ಜೀವನ ಶ್ರೇಯಸ್ಸಿಗೆ ಮೂಲವಾಗಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.