ಸರ್ಕಾರ ಕನ್ನಡ ಭಾಷೆಯಲ್ಲಿ ಶಿಕ್ಷಣ ಪಡೆದವರ ಜೀವನ ರೂಪಿಸಲಿ-ಶಾಸಕ ಶಿವಣ್ಣನವರನೈತಿಕ ಕ್ರಿಯಾಶೀಲತೆಯ ಪರಿಕಲ್ಪನೆ ಸೇರಿದಂತೆ ಸಮಾಜದಲ್ಲಿ ಉತ್ಕೃಷ್ಟತೆ ನಿರ್ಧರಿಸುವಲ್ಲಿ ಭಾಷೆ ಮತ್ತು ಸಾಹಿತ್ಯ ಪ್ರಮುಖವಾಗಿದ್ದು, ಮೂಲ ಸಾಕ್ಷರತೆಯಿಂದ ಸಾಂಸ್ಕೃತಿಕ ಸಾಕ್ಷರತೆ ಹಾಗೂ ವಿಮರ್ಶಾತ್ಮಕ ವಿಚಾರಗಳನ್ನು ಸಮಾಜ ಮತ್ತು ಸರ್ಕಾರದೆದುರು ಮಂಡಿಸುವ ಉದ್ದೇಶದಿಂದ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಲಾಗುತ್ತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.