ಸಾರಾಂಶ
ಜಾಗತಿಕ ಜನಸಂಖ್ಯೆ ಪ್ರಮಾಣ ಹೆಚ್ಚುತ್ತಿರುವುದರಿಂದ ಸಾಮಾಜಿಕ, ಆರ್ಥಿಕ, ಪರಿಸರ ನಾಶದಂಥ ಅನೇಕ ಸಮಸ್ಯೆಗಳು ಕಾಡುತ್ತಿವೆ. ಹೀಗಾಗಿ ಜನಸಂಖ್ಯೆ ನಿಯಂತ್ರಣ ಅಗತ್ಯವಿದೆ. ಸಂತಾನ ನಿಯಂತ್ರಣಕ್ಕೆ ವಿವಿಧ ಸೌಲಭ್ಯಗಳಿವೆ. ಸಾರ್ವಜನಿಕರು ಅವುಗಳ ಬಗ್ಗೆ ಅರಿತುಕೊಂಡು ಸೂಕ್ತ ಬಳಕೆಯೊಂದಿಗೆ ಜನಸಂಖ್ಯೆ ನಿಯಂತ್ರಣಕ್ಕೆ ಸಹಕರಿಸಬೇಕು.
ಕನ್ನಡಪ್ರಭ ವಾರ್ತೆ ಮಳವಳ್ಳಿ
ಜನಸಂಖ್ಯೆ ಮಿತಿಮೀರುತ್ತಿದ್ದು ಮಕ್ಕಳನ್ನು ಪಡೆಯುವುದು ಆಯ್ಕೆಯಾಗಿರಬೇಕೆ ಹೊರತು ಅನಿವಾರ್ಯವಾಗಿರಬಾರದು ಎಂದು ತಾಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ ತಿಳಿಸಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ತಾಲೂಕು ವೈದ್ಯಾಧಿಕಾರಿಗಳ ಕಚೇರಿ ಸಹಯೋಗದೊಂದಿಗೆ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಮಾತನಾಡಿ, ವಿಶ್ವದಲ್ಲಿಯೇ ಭಾರತ ಜನಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. ಜನಸಂಖ್ಯೆ ಸ್ಫೋಟಗೊಂಡರೇ ಆಹಾರ, ಉದ್ಯೋಗ ಸೇರಿದಂತೆ ಹಲವು ಸಮಸ್ಯೆ ಎದುರಿಸಬೇಕಾಗುತ್ತದೆ ಎಂದರು.
ಕುಟುಂಬ ಕಲ್ಯಾಣ ಯೋಜನಾ ವಿಧಾನಗಳನ್ನು ಅನುರಿಸಬೇಕು. ಕಾನೂನು ನಿಗದಿಪಡಿಸಿದ ವಯೋಮಾನದಲ್ಲಿ ಮಕ್ಕಳಿಗೆ ಮದುವೆ ಮಾಡಿಸುವ ಮೂಲಕ ಜನಸಂಖ್ಯಾ ನಿಯಂತ್ರಣಕ್ಕೆ ಜನರು ಮುಂದಾಗಬೇಕು ಎಂದರು.ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್ ಮಾತನಾಡಿ, ಪ್ರಕೃತಿ ಸಂಪನ್ಮೂಲಗಳ ಸಮರ್ಪಕ ಬಳಕೆಗೆ ಜನಸಂಖ್ಯೆ ನಿಯಂತ್ರಿಸುವುದೊಂದೇ ಏಕ ಮಾತ್ರ ಮಾರ್ಗ. ಜನಸಂಖ್ಯೆ ನಿಯಂತ್ರಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಜಾಗತಿಕ ಜನಸಂಖ್ಯೆ ಪ್ರಮಾಣ ಹೆಚ್ಚುತ್ತಿರುವುದರಿಂದ ಸಾಮಾಜಿಕ, ಆರ್ಥಿಕ, ಪರಿಸರ ನಾಶದಂಥ ಅನೇಕ ಸಮಸ್ಯೆಗಳು ಕಾಡುತ್ತಿವೆ. ಹೀಗಾಗಿ ಜನಸಂಖ್ಯೆ ನಿಯಂತ್ರಣ ಅಗತ್ಯವಿದೆ. ಸಂತಾನ ನಿಯಂತ್ರಣಕ್ಕೆ ವಿವಿಧ ಸೌಲಭ್ಯಗಳಿವೆ. ಸಾರ್ವಜನಿಕರು ಅವುಗಳ ಬಗ್ಗೆ ಅರಿತುಕೊಂಡು ಸೂಕ್ತ ಬಳಕೆಯೊಂದಿಗೆ ಜನಸಂಖ್ಯೆ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಡಾ.ರೇಣುಕಾದೇವಿ, ಡಾ.ಜ್ಯೋತಿ, ಡಾ.ಮುರುಳಿ, ಡಾ.ಸತೀಶ್, ಡಾ.ನೀತೇಶ್ ಕುಮಾರ್, ಡಾ.ಅನುಪಮಾ, ಫಾರ್ಮಸ್ಟಿ ರವಿ, ನರ್ಸ್ ಸುಂದ್ರಮ್ಮ ಹಾಗೂ ಸಿಬ್ಬಂದಿ ಇದ್ದರು.ಅರ್ಜಿ ಆಹ್ವಾನ
ಮಂಡ್ಯ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಆರ್ಯ ವೈಶ್ಯ ಸಮುದಾಯದವರಿಗೆ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಕಡ್ಡಾಯವಾಗಿ ಆನ್ ಲೈನ್ ನಲ್ಲಿ kacdc.karnataka.gov.in ವೆಬ್ ಸೈಟ್ ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 31 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08232-231804 ಅಥವಾ ಮೊ-9448451111 ಅನ್ನು ಸಂಪರ್ಕಿಸಬಹುದು ಎಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.ವ್ಯಕ್ತಿ ನಾಪತ್ತೆ
ಕೆ.ಆರ್.ಪೇಟೆ: ತಾಲೂಕಿನ ದೊಡ್ಡಯಾಚೇನಹಳ್ಳಿ ಗ್ರಾಮದ ಡಿ.ಆರ್ .ಕಿರಣ್ ಎಂಬ ವ್ಯಕ್ತಿ ಕಾಣೆಯಾಗಿದ್ದಾರೆ. ಕಾಣೆಯಾದ ವ್ಯಕ್ತಿಯು ಉದ್ದನೆಯ ಮುಖ, ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದಾನೆ. ಕಾಮೆಯಾದ ವೇಳೆ ನೀಲಿ ಜೀನ್ಸ್ ಪ್ಯಾಂಟ್ ಮತ್ತು ಕಪ್ಪು ಟೀ ಶರ್ಟ್ ಧರಿಸಿದ್ದನು. ವ್ಯಕ್ತಿಯ ಸುಳಿವು ಸಿಕ್ಕಲ್ಲಿ ದೂ. ಸಂ: 0821-2445168 ಅನ್ನು ಸಂಪರ್ಕಿಸಬಹುದು ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.