ವಿಚ್ಛೇದಿತೆ ನಂಬಿಸಿ ದೈಹಿಕ ಸಂಪರ್ಕ: ಬಿಜೆಪಿ ಮಾಧ್ಯಮ ಪ್ರಮುಖ್‌ ಬಂಧನ

| Published : Aug 07 2024, 01:08 AM IST

ವಿಚ್ಛೇದಿತೆ ನಂಬಿಸಿ ದೈಹಿಕ ಸಂಪರ್ಕ: ಬಿಜೆಪಿ ಮಾಧ್ಯಮ ಪ್ರಮುಖ್‌ ಬಂಧನ
Share this Article
  • FB
  • TW
  • Linkdin
  • Email

ಸಾರಾಂಶ

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷಗಟ್ಟಲೆ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖ ಶರತ್ ಕಲ್ಯಾಣಿ ಎಂಬಂತನನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷಗಟ್ಟಲೆ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖ ಶರತ್ ಕಲ್ಯಾಣಿ ಎಂಬಂತಾನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಶರತ್ ಕಲ್ಯಾಣಿಯನ್ನು ಮಹಿಳಾ ಠಾಣೆ ಇನ್ಸ್‌ಪೆಕ್ಟರ್ ನೇತೃತ್ವದ ಮೂರು ಜನರ ತಂಡ ಕಾರ್ಯಾಚರಣೆ ನಡೆಸಿ ಬಿಜಾಪುರ ತಾಲೂಕಿನಲ್ಲಿ ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಸಂತ್ರಸ್ತೆಯು ಜುಲೈ 26ರಂದು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿರುವ 43 ವರ್ಷದ ವಿಚ್ಛೇದಿತ ಮಹಿಳೆಗೆ ಶರತ್ ಕಲ್ಯಾಣಿಯು 2023 ರ ಆಗಸ್ಟ್ 31 ರಿಂದ ಪರಿಚಯವಿದ್ದು, ತನಗೆ ಮದುವೆಯಾಗಿರುವ ಮಾಹಿತಿ ಮುಚ್ಚಿಟ್ಟು ನಾನಿನ್ನು ಅವಿವಾಹಿತ ನಿನ್ನನ್ನು ಪ್ರೀತಿಸುತ್ತೇನೆ, ಮದುವೆಯಾಗಿ ನಿನಗೆ ಬಾಳು ಕೊಡುತ್ತೇನೆ ಎಂದು ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಏಳೆಂಟು ತಿಂಗಳಿಂದ ಮಹಿಳೆ ಜೊತೆ ನಿರಂತರ ಸಂಪರ್ಕದಲ್ಲಿದ್ದ ಶರತ್ ಆ ಮಹಿಳೆಯು ಮದುವೆಯಾಗು ಎಂದು ಒತ್ತಾಯಿಸಿದಾಗ ನನಗೆ ಮನೆ ಕಡೆ ಹಣಕಾಸಿನ ಸಮಸ್ಯೆ ಇದೆ ಅದು ಬಗೆಹರಿದ ನಂತರ ಮದುವೆಯಾಗುತ್ತೇನೆ ಎಂದು ಭರವಸೆ ನೀಡಿದ್ದ. ಅಲ್ಲದೆ ಈಗ ನನಗೆ ಸಹಾಯ ಮಾಡು ಎಂದು ಕೇಳಿದಾಗ ಮಹಿಳೆಯು ಹಲವು ಬಾರಿ ಒಟ್ಟು ನಾಲ್ಕು ಲಕ್ಷ ಹಣವನ್ನು ಶರತ್ ಕಲ್ಯಾಣಿಗೆ ನೀಡಿದ್ದರು. ನಂತರ ಮಹಿಳೆ ಮದುವೆಗೆ ಒತ್ತಾಯಿಸಿದಾಗ ಶರತ್ ಆಕೆಯ ಮನೆ ಕಡೆ ಹೋಗು ವುದನ್ನೂ ನಿಲ್ಲಿಸಿದ್ದಲ್ಲದೆ ಫೋನ್ ಸಂಪರ್ಕ ಸಹ ಕಡಿದುಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಕೇಳಲು ಮಹಿಳೆ ಶರತ್ ಕಲ್ಯಾಣಿಯ ಮನೆಗೆ ಹೋದಾಗ ಆತನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈಯಿಂದ ಹೊಡೆದು ಕೊಲೆ ಬೆದರಿಕೆ ಹಾಕಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿ ನನ್ನಿಂದಲೇ ಹಣ ಪಡೆದು ಶರತ್ ಕಲ್ಯಾಣಿ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಹಿಳೆ ದೂರು ಸಲ್ಲಿಸಿದ್ದರು. ದೂರು ಸ್ವೀಕರಿಸಿರುವ ಮಹಿಳಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದರು.ಕಲ್ಯಾಣಿ ವಜಾಗೊಳಿಸಿ ಆದೇಶ

ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ವಿಭಾಗದ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶರತ್ ಕಲ್ಯಾಣಿ ಅವರನ್ನು ತಮ್ಮ ಜವಾಬ್ದಾರಿಯಿಂದ ತಕ್ಷಣದಿಂದ ಮುಕ್ತಿಗೊಳಿಸಿ ಜಾರಿಗೆ ಬರುವಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಆದೇಶಿದ್ದಾರೆ.

ಶರತ್ ಕಲ್ಯಾಣಿ ವಿರುದ್ಧ ಅತ್ಯಾಚಾರ-ವಂಚನೆ ವಂಚನೆ ಪ್ರಕರಣ ಕೇಳಿಬಂದ ಹಿನ್ನೆಲೆಯಲ್ಲಿ ವಜಾಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.