ಹುಬ್ಬಳ್ಳಿಯಲ್ಲಿ 20ಕ್ಕೆ ಹವ್ಯಕ ಹಬ್ಬ

| Published : Jul 18 2025, 12:45 AM IST

ಸಾರಾಂಶ

ಈ ಹವ್ಯಕ ಹಬ್ಬ ಒಂದು ವೈಶಿಷ್ಟ್ಯಪೂರ್ಣವಾಗಿದ್ದು, ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮೊದಲಾದ ಕಡೆಗಳ ಹವ್ಯಕರ ವಿಶಿಷ್ಟ ಪರಂಪರೆ, ಸಂಸ್ಕೃತಿ ಹಾಗೂ ಭಾಷೆಗಳನ್ನು ಉತ್ತರ ಕರ್ನಾಟಕದ ಜನತೆಗೆ ಪರಿಚಯಿಸುವ ಹಬ್ಬವಾಗಿದೆ.

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರದಲ್ಲಿ ಕಳೆದ 43 ವರ್ಷಗಳಿಂದ ಸಮಾಜ ಸೇವೆ ಹಾಗೂ ಹವ್ಯಕ ಸಮುದಾಯದ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಹವ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯು ಜು. 20 ರಂದು ಇಲ್ಲಿನ ಹವ್ಯಕ ಭವನದಲ್ಲಿ 12ನೆಯ ಹವ್ಯಕ ಹಬ್ಬವನ್ನು ಆಚರಿಸುತ್ತಿದೆ. ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಉತ್ತಮ ಅಂಕ ಪಡೆದವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.

ಈ ಹಬ್ಬ ಒಂದು ವೈಶಿಷ್ಟ್ಯಪೂರ್ಣವಾಗಿದ್ದು, ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮೊದಲಾದ ಕಡೆಗಳ ಹವ್ಯಕರ ವಿಶಿಷ್ಟ ಪರಂಪರೆ, ಸಂಸ್ಕೃತಿ ಹಾಗೂ ಭಾಷೆಗಳನ್ನು ಉತ್ತರ ಕರ್ನಾಟಕದ ಜನತೆಗೆ ಪರಿಚಯಿಸುವ ಹಬ್ಬವಾಗಿದೆ.

ಈ ವರ್ಷವೂ ಹವ್ಯಕರ ವೈಶಿಷ್ಟ್ಯಪೂರ್ಣ ಆರತಿಕಟ್ಟು ಸ್ಪರ್ಧೆ, ಹವ್ಯಕರ ಮಂಗಳ ಕಾರ್ಯದ ಸಾಂಪ್ರದಾಯಿಕ ಹಾಡುಗಳು ಸ್ಪರ್ಧೆ, ಹವ್ಯಕರ ಬಾಳೆಹಣ್ಣಿನ ಸಿಹಿ ತಿಂಡಿಗಳು ಮತ್ತು ಅಕ್ಕಿ ತಿಂಡಿಗಳ ಸ್ಪರ್ಧೆಗಳು ನಡೆಯಲಿವೆ. ಇದೇ ವೇಳೆ ಮಹಾನಗರದಲ್ಲಿ ನೆಲೆಸಿರುವ ಹವ್ಯಕರ ಮಾಹಿತಿಗಳನ್ನೊಳಗೊಂಡ ಹವ್ಯಕ ಸಂಪರ್ಕ ಸೇತು ಬಿಡುಗಡೆಯಾಗಲಿದೆ.

ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಲಿದೆ. ಅತಿಥಿಗಳಾಗಿ ಅಖಿಲ ಹವ್ಯಕ ಮಹಾಸಭಾ ಅಧ್ಯಕ್ಷ ಡಾ. ಗಿರಿಧರ ಕಜೆ, ಸೆಲ್ಕೋ ಸೋಲಾರ್ ಸಂಸ್ಥೆಯ ಸಿಇಒ ಮೋಹನ್ ಭಾಸ್ಕರ್ ಹೆಗಡೆ, ಸಂಸ್ಥೆಯ ಮಾಜಿ ಅಧ್ಯಕ್ಷ ಎಂ.ಕೆ. ಹೆಗಡೆ ಹಾಗೂ ಹಿರಿಯರಾದ ಆರ್ಥಿಕ ತಜ್ಞ ಗೋಪಾಲಕೃಷ್ಣ ಕಡೆಕೋಡಿ, ಅಖಿಲ ಹವ್ಯಕ ಮಹಾಸಭಾ ಕಾರ್ಯದರ್ಶಿ ವೇಣು ವಿಘ್ನೇಶ ಸಂಪ ಆಗಮಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ವಿ.ಎಂ. ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು ಎಂದು ಪ್ರಕಟಣೆ ತಿಳಿಸಿದೆ.