ಸಾರಾಂಶ
ವಾಹನಗಳಿಗೆ ನಿಗಾ ವ್ಯವಸ್ಥೆ (ಟ್ರ್ಯಾಕಿಂಗ್ ಸಿಸ್ಟಂ) ಹಾಗೂ ಪ್ಯಾನಿಕ್ ಬಟನ್ ಅಳವಡಿಸದಿದ್ದರೆ ಫಿಟ್ನೆಸ್ ಸರ್ಟಿಫಿಕೇಟ್ ನವೀಕರಣ ಮಾಡಬಾರದು ಎಂದು ನಿರ್ದೇಶಿಸಿ ರಾಜ್ಯ ಸಾರಿಗೆ ಇಲಾಖೆ ಹೊರಡಿಸಿರುವ ಆದೇಶ ಪ್ರಶ್ನಿಸಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ವಾಹನಗಳಿಗೆ ನಿಗಾ ವ್ಯವಸ್ಥೆ (ಟ್ರ್ಯಾಕಿಂಗ್ ಸಿಸ್ಟಂ) ಹಾಗೂ ಪ್ಯಾನಿಕ್ ಬಟನ್ ಅಳವಡಿಸದಿದ್ದರೆ ಫಿಟ್ನೆಸ್ ಸರ್ಟಿಫಿಕೇಟ್ ನವೀಕರಣ ಮಾಡಬಾರದು ಎಂದು ನಿರ್ದೇಶಿಸಿ ರಾಜ್ಯ ಸಾರಿಗೆ ಇಲಾಖೆ ಹೊರಡಿಸಿರುವ ಆದೇಶ ಪ್ರಶ್ನಿಸಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಬಿ.ಆರ್. ಸುಂದರ್ ರಾಜ್ ಗುಪ್ತಾ, ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದಿದ್ದರೆ ವಾಹನ ಓಡಿಸಲು ಆಗುವುದಿಲ್ಲ. ಸರ್ಕಾರದ ಸೂಚನೆಯಂತೆ ನ.30ಕ್ಕೆ ನವೀಕರಣದ ಗಡುವು ಮುಗಿಯಲಿದೆ. ಇದರಿಂದ ಟ್ಯಾಕ್ಸಿ ಮಾಲೀಕರು, ಡ್ರೈವರ್‌ಗಳಿಗೆ ಕಷ್ಟವಾಗಲಿದೆ. ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಖಾಸಗಿ ವಾಹನಗಳಿಗೆ ವಿನಾಯಿತಿ ನೀಡಿಲ್ಲ. ಈ ಮೂಲಕ ತಾರತಮ್ಯ ಎಸಗಲಾಗಿದೆ. ಸರ್ಕಾರದ ಅಧಿಸೂಚನೆಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದರು.
ಇದಕ್ಕೆ ಸರ್ಕಾರದ ಪರ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎರಡು ವಾರ ಸಮಯ ನೀಡಬೇಕು ಎಂದು ಕೋರಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಸರ್ಕಾರದ ಅಧಿಸೂಚನೆಗೆ ಏಕಾಏಕಿ ತಡೆ ನೀಡಲಾಗುವುದಿಲ್ಲ. ಮೊದಲು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಬೇಕು. ನಂತರ ಅರ್ಜಿಗೆ ಸರ್ಕಾರ ಆಕ್ಷೇಪಣೆ ಸಲ್ಲಿಸಿದ ನಂತರ ಬಳಿಕವಷ್ಟೇ ಅಧಿಸೂಚನೆಗೆ ತಡೆಯಾಜ್ಞೆ ನೀಡಬೇಕೆಂಬ ಅರ್ಜಿದಾರರ ಮಧ್ಯಂತರ ಮನವಿ ಪರಿಗಣಿಸಲಾಗುವುದು ಎಂದು ಹೇಳಿ, ವಿಚಾರಣೆ ಮುಂದೂಡಿತು.
ರಾಜ್ಯ ಸಾರಿಗೆ ಇಲಾಖೆ 2023ರ ನ.23ರಂದು ಹೊರಡಿಸಿರುವ ಆದೇಶ ರದ್ದು ಕೋರಿ ಬೆಂಗಳೂರು ಪ್ರವಾಸಿ ಟ್ಯಾಕ್ಸಿ ಮಾಲೀಕರ ಸಂಸ್ಥೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ಪೀಠ ಈ ನೋಟಿಸ್ ನೀಡಿದೆ.