ಸಾರಾಂಶ
ಕನ್ನಡಪ್ರಭ ವಾರ್ತೆ ಭಾರತೀನಗರ
ಹುಲಿಗೆರೆಪುರ ಗೇಟ್ ಬಳಿ ಅನಿಕೇತನ ವಿದ್ಯಾಸಂಸ್ಥೆ ವಿದ್ಯಾರ್ಥಿ ಎಚ್.ಸಿ.ಸಂದೀಪ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗ ಪ್ರತಿನಿಧಿಸಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ಮಂಗಳೂರಿನಲ್ಲಿ ಅ.18, 19ರಂದು ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯ ಫೈನಲ್‌ನಲ್ಲಿ ಎಚ್.ಸಿ.ಸಂದೀಪ್ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟದ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿದ್ದಾನೆ. ವಿದ್ಯಾರ್ಥಿ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಚ್. ಕಾಳೀರಯ್ಯ, ಶಾಲೆ ಆಡಳಿತ ಮಂಡಳಿ, ಶಿಕ್ಷಕ ವೃಂದ ಅಭಿನಂದಿಸಿದೆ. ನಾಳೆ ವಿದ್ಯುತ್ ವ್ಯತ್ಯಯ
ನಾಗಮಂಗಲ:ತಾಲೂಕಿನ ಗುಡ್ಡೇನಹಳ್ಳಿ ಮತ್ತು ಬೋಗಾದಿ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ವಿದ್ಯುತ್ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಈ ಎರಡೂ ಕೇಂದ್ರಗಳಿಂದ ಹೊರಹೊಮ್ಮುವ ಚಿಣ್ಯ, ಸಾಮಕಹಳ್ಳಿ, ಕಾಂತಾಪುರ ಎನ್‌ಜೆವೈ ಸೇರಿದಂತೆ ಚಿಣ್ಯ, ಹೊಣಕೆರೆ, ಮಣ್ಣಹಳ್ಳಿ, ಬ್ರಹ್ಮದೇವರಹಳ್ಳಿ, ಕಾಂತಾಪುರ ಮತ್ತು ಬೋಗಾದಿ ಗ್ರಾಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಎನ್‌ಜೆವೈ ಮತ್ತು ಐಪಿ 11ಕೆವಿ ಮಾರ್ಗಗಳಿಗೆ ಅ.24ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಇಲಾಖೆಯೊಂದಿಗೆ ಸಹಕರಿಸುವಂತೆ ಸೆಸ್ಕಾಂ ನಾಗಮಂಗಲ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
ನಾಳೆ ಶೈಕ್ಷಣಿಕ ಸಮ್ಮೇಳನಮಂಡ್ಯ:
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ವೇದಿಕೆಯಿಂದ ಅ.24ರಂದು ಬೆಳಗ್ಗೆ 10 ಗಂಟೆಗೆ ಶೈಕ್ಷಣಿಕ ಸಮ್ಮೇಳನ ಮತ್ತು ನೂತನ ಮಾದರಿ ಪ್ರಶ್ನೆ ಪತ್ರಿಕೆ, ನೀಲನಕ್ಷೆ ಅನ್ವಯಿಕತೆ ಕಾರ್ಯಾಗಾರ ಏರ್ಪಡಿಸಲಾಗಿದೆ. ಉದ್ಘಾಟನೆಯನ್ನು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಚಲುವಯ್ಯ ನೆರವೇರಿಸುವರು. ಆಧುನಿಕ ಬದುಕಿನ ತಲ್ಲಣಗಳಿಗೆ ಆಯ್ಕೆಗಳೇ ಮುಖ್ಯ ವಿಷಯ ಕುರಿತು ಲೇಖಕಿ ನೇಮಿಚಂದ್ರ ವಿಶೇಷ ಉಪನ್ಯಾಸ ನೀಡುವರು. ಅಧ್ಯಕ್ಷತೆಯನ್ನು ಪದವಿ ಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ವೇದಿಕೆ ಅಧ್ಯಕ್ಷ ಲೋಕೇಶ್ ಬೆಕ್ಕಳೆಲೆ ವಹಿಸುವರು. ಪ್ರಾಂಶುಪಾಲರ ಸಂಘದ ಅಧ್ಯಕ್ಷ ಯು.ಎಸ್.ನಟರಾಜು, ವೇದಿಕೆ ಗೌರವಾಧ್ಯಕ್ಷ ಎಚ್.ಎಸ್.ಚಂದ್ರಶೇಖರಯ್ಯ ಉಪಸ್ಥಿತರಿರುವರು.