ಶೀಘ್ರ ಚುನಾವಣಾ ಪ್ರಚಾರಕ್ಕೆ ಎಚ್‌.ಡಿ.ದೇವೇಗೌಡ, ಅಮಿತ್ ಶಾ ಬರಲಿದ್ದಾರೆ: ಡಾ.ಮಂಜುನಾಥ್‌

| Published : Mar 28 2024, 12:49 AM IST

ಶೀಘ್ರ ಚುನಾವಣಾ ಪ್ರಚಾರಕ್ಕೆ ಎಚ್‌.ಡಿ.ದೇವೇಗೌಡ, ಅಮಿತ್ ಶಾ ಬರಲಿದ್ದಾರೆ: ಡಾ.ಮಂಜುನಾಥ್‌
Share this Article
  • FB
  • TW
  • Linkdin
  • Email

ಸಾರಾಂಶ

ಬೆಂಗಳೂರು ಗ್ರಾಮಾಂತರ ಚುನಾವಣೆ ಮೈತ್ರಿ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಸಾರ್ವಜನಿಕರಿಂದ ಉತ್ತಮ ಬೆಂಬಲ ದೊರೆಯುತ್ತಿದೆ. ಮುಂದಿನ ದಿನಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸೇರಿ ಹಲವರು ರಾಜ್ಯ ನಾಯಕರು ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ತಿಳಿಸಿದ್ದಾರೆ,

ಕನ್ನಡಪ್ರಭ ವಾರ್ತೆ ಕುಣಿಗಲ್ ಬೆಂಗಳೂರು ಗ್ರಾಮಾಂತರ ಚುನಾವಣೆ ಮೈತ್ರಿ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಸಾರ್ವಜನಿಕರಿಂದ ಉತ್ತಮ ಬೆಂಬಲ ದೊರೆಯುತ್ತಿದೆ. ಮುಂದಿನ ದಿನಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸೇರಿ ಹಲವರು ರಾಜ್ಯ ನಾಯಕರು ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ತಿಳಿಸಿದ್ದಾರೆ,ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಜಂಟಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸಲು ತೀರ್ಮಾನಿಸಿ ದ್ದು, ಪ್ರತಿಯೊಬ್ಬ ಕಾರ್ಯಕರ್ತರು ಭಾಗವಹಿಸಬೇಕೆಂದು ಮನವಿ ಮಾಡಿದರು. ಹಳ್ಳಿಗಳಲ್ಲಿ ಉತ್ತಮ ಸ್ವಾಗತ ಸಿಗುತ್ತಿದೆ. ಆದ್ದರಿಂದ ಈ ಬಾರಿ ನನ್ನ ಗೆಲುವು ಖಚಿತ ಎಂದರು, ಕಾರ್ಯಕ್ರಮದಲ್ಲಿ ಸ್ಥಳೀಯ ಬಿಜೆಪಿ ಮುಖಂಡ ಡಿ ಕೃಷ್ಣಕುಮಾರ್ ಹಾಗೂ ಜೆಡಿಎಸ್ ಮುಖಂಡ ಹಾಗೂ ಸೋದರ ಡಿ. ನಾಗರಾಜಯ್ಯ ಅವರ ಕೈಹಿಡಿದು ಫೋಟೋ ಪೋಸ್ ನೀಡಿ ಇಬ್ಬರು ಒಟ್ಟಾಗಿದ್ದೇವೆ ಎಂಬ ಸಂದೇಶ ಅಣ್ಣ-ತಮ್ಮಂದಿರು ಸಾರಿದರು.ಆರ್‌ಆರ್ ನಗರ ಶಾಸಕ ಮುನಿರತ್ನ ಮಾತನಾಡಿ, ಸೋದರರಿಗೆ ಸರಿಯಾದ ಸವಾಲ್ ಹಾಕಲು ಕುಣಿಗಲ್‌ನಲ್ಲಿ ಇಬ್ಬರು ಸೋದರರು ಒಟ್ಟಾಗಿದ್ದಾರೆ. ಇದು ಸಂತೋಷದ ವಿಚಾರ. ಜೆಡಿಎಸ್ ಮತ್ತು ಬಿಜೆಪಿಯ ಎಲ್ಲಾ ಕಾರ್ಯಕರ್ತರು ಒಟ್ಟಾಗಬೇಕು ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಹಲವರು ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಸಂಸದ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರದಲ್ಲಿ ತಲ್ಲಣ ಉಂಟಾಗುತ್ತದೆ ಎಂದರು.ಸಿ.ಪಿ.ಯೋಗೇಶ್ವರ್ ಮಾತನಾಡಿ, ಅಣ್ಣ-ತಮ್ಮಂದಿರ ಇಬ್ಬಾಗದಿಂದ ಕುಣಿಗಲ್ ರಾಜಕಾರಣ ಹಾಗೂ ಅಭಿವೃದ್ಧಿ ಹಾಳಾಗಿತ್ತು. ಮುಂದಿನ ದಿನಗಳಲ್ಲಿ ಕುಣಿಗಲ್ ಇತಿಹಾಸ ಬದಲಾಗಲಿದೆ. ಡಾ.ಮಂಜುನಾಥ್ ಜನರ ಮನ ಗೆದ್ದಿದ್ದಾರೆ. ಅದೇ ರೀತಿ ಈ ಪಕ್ಷಾತೀತವಾಗಿ ಜನರು ಅವರನ್ನು ಗೆಲ್ಲಿಸುತ್ತಾರೆ.ಕಾಂಗ್ರೆಸಿಗರು ಕೇವಲ ಮಹಿಳಾ ಮತದಾರರನ್ನು ಗುರಿಯಾಗಿಸಿಕೊಳ್ಳುತ್ತಿದ್ದು, ನೀವುಗಳು ನಿಮ್ಮ ಮನೆಯಲ್ಲಿ ಮಹಿಳೆಯ ರಿಗೆ ಕಾಂಗ್ರೆಸ್ ಸರ್ಕಾರದ ಲೋಪಗಳ ವಿರುದ್ಧ ಮತ್ತು ಡಾ.ಮಂಜುನಾಥ್ ಬಗ್ಗೆ ಮನವರಿಕೆ ಮಾಡಿಕೊಡಬೇಕಿದೆ ಎಂದರು. ಸಂಸದರ ಚುನಾವಣೆ ನಂತರ ಅವರ ಎಲ್ಲಾ ಭಾಗ್ಯಗಳು ಕೊನೆ ಆಗುತ್ತವೆ. ಕನಕಪುರ ಸೇರಿದಂತೆ 8 ಕ್ಷೇತ್ರಗಳಲ್ಲಿ ಮಂಜುನಾಥ ಪರ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು ಮಾಜಿ ಸಚಿವ ಡಿ.ನಾಗರಾಜಯ್ಯ ಮಾತನಾಡಿ, ಅಣ್ಣ ತಮ್ಮಂದಿರು ಒಂದಾಗಿದ್ದಾರೆ ಎಂದು ಉದಾಸೀನತೆ ಮಾಡಿದರೆ ಕಷ್ಟ ಆಗುತ್ತದೆ. ಪ್ರತಿಯೊಬ್ಬರೂ ಜವಾಬ್ದಾರಿ ಹೊತ್ತು ಬೂತ್ ಗಳಲ್ಲಿ ಹೆಚ್ಚು ಮತ ಮಂಜುನಾಥ ಪರ ಸೆಳೆಯುವ ಕೆಲಸ ಮಾಡಬೇಕಿದೆ. ಕಾಂಗ್ರೆಸ್ ಮುಖಂಡರು ಹಲವಾರು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರನ್ನು ಖರೀದಿ ಮಾಡುವಲ್ಲಿ ತಲ್ಲಿನರಾಗಿದ್ದಾರೆ. ಎಚ್ಚರದಿಂದ ಕಾರ್ಯನಿರ್ವಹಿಸಿ, ಅವರ ಆಮಿಷಗಳಿಗೆ ಒಳಗಾಗುವುದು ಬೇಡ ಎಂದರು.

ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್ ಮಾತನಾಡಿ, ಡಾ. ಮಂಜುನಾಥ್ ಗೆಲ್ಲಿಸುವುದು ಬಹು ಮುಖ್ಯವಾಗಿದೆ. ಪ್ರತಿಯೊಬ್ಬರೂ ಕೂಡ ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಿ ಎಂದರು.

ಈ ಸಂದರ್ಭದಲ್ಲಿ, ಬಿಜೆಪಿ ದಲಿತ ಮುಖಂಡ ವೈಎಚ್ ಹುಚ್ಚಯ್ಯ, ಮಾಗಡಿ ಮಾಜಿ ಶಾಸಕ ಮಂಜುನಾಥ್, ಬಿಜೆಪಿ ಮಂಡಲ ಅಧ್ಯಕ್ಷ ಬಲರಾಮ್, ಜೆಡಿಎಸ್ ತಾಲೂಕು ಅಧ್ಯಕ್ಷ ಬಿಎನ್ ಜಗದೀಶ್, ಜೆಡಿಎಸ್ ಮುಖಂಡ ಡಾ.ರವಿಬಾಬು, ತಾಲೂಕು ಪಂಚಾಯಿತಿ ಸದಸ್ಯ ಕೆಂಪೇಗೌಡ, ತರಿಕೆರೆ ಪ್ರಕಾಶ್, ಸೇರಿದಂತೆ ಹಲವಾರು ಮುಖಂಡರು ಇದ್ದರು,