ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಕೆ

| Published : Mar 23 2024, 01:01 AM IST

ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಶೀಘ್ರ ಗುಣಮುಖರಾಗಿ ಬರಲೆಂದು ಹಾಗೂ ಅವರ ಆಯಸ್ಸು ಹೆಚ್ಚಾಗಲು ರಾಜ್ಯದ ಎಲ್ಲ ಜನರ ಆಶೀರ್ವಾದ ಕುಮಾರಣ್ಣನವರ ಮೇಲಿರಲಿ. ನಾಡಿನ ರೈತರು ಮತ್ತು ಎಲ್ಲ ವರ್ಗಗಳ ಜನರಿಗೆ ಕುಮಾರಸ್ವಾಮಿ ಅವರ ಅವಶ್ಯಕತೆ ಇದೆ. ಆದ್ದರಿಂದ ಮಾಜಿ ಸಿಎಂ ಎಚ್ .ಟಿ. ಕುಮಾರಸ್ವಾಮಿ ಅವರ ಆರೋಗ್ಯ ಉತ್ತಮವಾಗಿರಬೇಕೆಂದು ವಿಶೇಷ ಪೂಜೆ ಸಲ್ಲಿಸಲಾಗಿದೆ.

ಕನ್ನಡಪ್ರಭಘ ವಾರ್ತೆ ನಾಗಮಂಗಲ

ಹೃದಯ ಶಸ್ತ್ರಚಿಕಿತ್ಸೆಗಾಗಿ ಚೆನೈ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಿ ಆರೋಗ್ಯ ವೃದ್ಧಿಗಾಗಿ ಪ್ರಾರ್ಥಿಸಿ ತಾಲೂಕು ಜೆಡಿಎಸ್‌ ಕಾರ್ಯಕರ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಪಟ್ಟಣದ ಟಿ.ಬಿ.ಬಡಾವಣೆಯ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಆಯೋಜಿಸಿದ್ದ ಜೆಡಿಎಸ್‌ ಕಾರ್ಯಕರ್ತರು ಸಾಮೂಹಿಕ ಪ್ರಾರ್ಥನೆಯೊಂದಿಗೆ ಕುಮಾರಸ್ವಾಮಿ ಆರೋಗ್ಯ ವೃದ್ಧಿಸುವಂತೆ ಪ್ರಾರ್ಥಿಸಿದರು.

ಈ ವೇಳೆ ಜೆಡಿಎಸ್ ಮುಖಂಡ ಸಾಮಕಹಳ್ಳಿ ಯದುರಾಜ್ ಮಾತನಾಡಿ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಶೀಘ್ರ ಗುಣಮುಖರಾಗಿ ಬರಲೆಂದು ಹಾಗೂ ಅವರ ಆಯಸ್ಸು ಹೆಚ್ಚಾಗಲು ರಾಜ್ಯದ ಎಲ್ಲ ಜನರ ಆಶೀರ್ವಾದ ಕುಮಾರಣ್ಣನವರ ಮೇಲಿರಲಿ ಎಂದು ಪ್ರಾರ್ಥಿಸಲಾಗಿದೆ ಎಂದರು.

ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ.ಕೃಷ್ಣಪ್ಪ ಮಾತನಾಡಿ, ನಾಡಿನ ರೈತರು ಮತ್ತು ಎಲ್ಲ ವರ್ಗಗಳ ಜನರಿಗೆ ಕುಮಾರಸ್ವಾಮಿ ಅವರ ಅವಶ್ಯಕತೆ ಇದೆ. ಆದ್ದರಿಂದ ಮಾಜಿ ಸಿಎಂ ಎಚ್ .ಟಿ.ಕುಮಾರಸ್ವಾಮಿ ಅವರ ಆರೋಗ್ಯ ಉತ್ತಮವಾಗಿರಬೇಕೆಂದು ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಈ ವೇಳೆ ಜಿಪಂ ಮಾಜಿ ಸದಸ್ಯ ಚಂದ್ರೇಗೌಡ, ಮುಖಂಡರಾದ ನಾಗೇಶ್, ರಾಮು, ದಿನೇಶ್, ಅಂಬರೀಶ್, ಬಸವೇಗೌಡ, ರಮೇಶ್, ತಿರುಮಲಯ್ಯ, ಪುರಸಭಾ ಸದಸ್ಯ ಚನ್ನಪ್ಪ ಸೇರಿದಂತೆ ಜೆಡಿಎಸ್‌ ಕಾರ್ಯಕರ್ತರು ಇದ್ದರು.ಹಲಗೂರಿನಲ್ಲಿ ವಿಶೇಷ ಪೂಜೆ ಸಲ್ಲಿಕೆಹಲಗೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಗ್ರಾಮ ದೇವತೆ ಪಟ್ಟಲದಮ್ಮನ ದೇವಸ್ಥಾನದಲ್ಲಿ ಗುರುವಾರ ಬೆಳಗ್ಗೆ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಮತ್ತು ಜೆಡಿಎಸ್ ಕಾರ್ಯಕರ್ತರು ಪೂಜೆ ಸಲ್ಲಿಸಿದರು.ಚೆನ್ನೈನದಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಕುಮಾರಸ್ವಾಮಿ ಅವರ ಆರೋಗ್ಯ ವೃದ್ಧಿ, ಬೇಗ ಗುಣಮುಖರಾಗ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಈ ವೇಳೆ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿ, ನಮ್ಮ ನೆಚ್ಚಿನ ನಾಯಕರು, ರೈತರ ಹಾಗೂ ಬಡವರ ಏಳಿಗೆಗಾಗಿ ಶ್ರಮಿಸುತ್ತಿರುವ ಕುಮಾರಸ್ವಾಮಿ ಅವರು ಅನೇಕ ಯೋಜನೆಗಳನ್ನು ಜಾರಿಗೆ ತಂದು ಅವರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಾರೆ ಎಂದರು.ಈ ವೇಳೆ ಗ್ರಾಪಂ ಸದಸ್ಯ ಸುರೇಂದ್ರ, ಮುಖಂಡರಾದ ಎಚ್.ಎನ್.ರಾಮಚಂದ್ರೇಗೌಡ, ಎಚ್.ಎಂ.ಆನಂದ್ ಕುಮಾರ್, ಸೋಮಶೇಖರ್, ತಮ್ಮಣ್ಣೇಗೌಡ, ಎಚ್.ಬಿ. ಶಿವಮಾದು, ಕರಲುಕಟ್ಟೆ ಸುರೇಶ, ಎಚ್. ಆರ್. ವಿಶ್ವ, ಎಚ್.ಎನ್. ಶಿವಕುಮಾರ್, ರವೀಶ, ರವಿ ಮೋದಿ, ಎನ್.ಕೆ. ಕುಮಾರ್, ಗಂಗಾಧರ, ಮುತ್ತತ್ತಿ ಶಂಕರ, ಗೊಲ್ಲರಹಳ್ಳಿ ಜಗದೀಶ, . ಜಿ .ಕೆ .ನಾಗೇಶ್, ಸೇರಿದಂತೆ ಇತರರು ಇದ್ದರು.