ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಆಂಜನೇಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಕೆ

| Published : Mar 21 2024, 01:02 AM IST

ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ವೃದ್ಧಿಗಾಗಿ ಆಂಜನೇಯ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಗ್ಯವಾಗಿರಲು, ಅವರ ಸೇವೆ ಹಲವು ವರ್ಷಗಳ ಕಾಲ ರಾಜ್ಯ ಮತ್ತು ರಾಷ್ಟ್ರ ರಾಜಕಾರಣಕ್ಕೆ ಸದ್ಬಳಕೆಯಾಗಲಿ ಎಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮ ಅಧಿಕಾರದ ಅವಧಿಯಲ್ಲಿ 90 ಸಾವಿರ ಹೆಕ್ಟೆರ್ ನೀರಾವರಿ ಪ್ರದೇಶವನ್ನು 4 ಲಕ್ಷ ಹೆಕ್ಟೆರ್ ನೀರಾವರಿ ಪ್ರದೇಶವನ್ನಾಗಿ ಪರಿವರ್ತನೆ ಮಾಡಿದರು. ಇವರ ಪುತ್ರರಾದ ಎಚ್.ಡಿ.ಕುಮಾರಸ್ವಾಮಿ ಬಡವರು, ರೈತರ ಬಗ್ಗೆ ಕಾಳಜಿ ಹೊಂದಿ ರಾಜ್ಯದ ರೈತರ ಸಾಲಮನ್ನಾ ಮಾಡಿ ಸಾಧನೆ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ವೃದ್ಧಿಗೆ ಪ್ರಾರ್ಥಿಸಿ ಪಟ್ಟಣದ ಮೂಡಲ ಬಾಗಿಲು ಆಂಜನೇಯ ದೇವಾಲಯದಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ದಶರಥ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿನೆ ಸಲ್ಲಿಸಿದರು.

ನಂತರ ಪುರಸಭೆ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ಎಸ್.ಪ್ರಕಾಶ್ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಗ್ಯವಾಗಿರಲು, ಅವರ ಸೇವೆ ಹಲವು ವರ್ಷಗಳ ಕಾಲ ರಾಜ್ಯ ಮತ್ತು ರಾಷ್ಟ್ರ ರಾಜಕಾರಣಕ್ಕೆ ಸದ್ಬಳಕೆಯಾಗಲಿ ಎಂದು ಪ್ರಾರ್ಥಿಸಿ ಪೂಜೆ ಸಲ್ಲಿಸಿರುವುದಾಗಿ ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮ ಅಧಿಕಾರದ ಅವಧಿಯಲ್ಲಿ 90 ಸಾವಿರ ಹೆಕ್ಟೆರ್ ನೀರಾವರಿ ಪ್ರದೇಶವನ್ನು 4 ಲಕ್ಷ ಹೆಕ್ಟೆರ್ ನೀರಾವರಿ ಪ್ರದೇಶವನ್ನಾಗಿ ಪರಿವರ್ತನೆ ಮಾಡಿದರು. ಇವರ ಪುತ್ರರಾದ ಎಚ್.ಡಿ.ಕುಮಾರಸ್ವಾಮಿ ಬಡವರು, ರೈತರ ಬಗ್ಗೆ ಕಾಳಜಿ ಹೊಂದಿ ರಾಜ್ಯದ ರೈತರ ಸಾಲಮನ್ನಾ ಮಾಡಿ ಸಾಧನೆ ಮಾಡಿದ್ದಾರೆ ಎಂದರು.

ಕಾಂಗ್ರೆಸ್‌ ಕ್ಯೂಲರ್ ಪದ ತೆಗೆಯಿರಿ ಎಂದು ಜೆಡಿಎಸ್‌ಗೆ ಹೇಳುತ್ತಿದೆ. ಪಾಕಿಸ್ತಾನ್ ಪರ ಘೋಷಣೆ ಕೂಗಿರುವುದನ್ನು ಖಂಡಿಸಲು ಅವರಿಗೆ ಯೋಗ್ಯತೆ ಇಲ್ಲ. ಹನುಮಾನ್ ಚಾಲೀಸ್ ಹಾಕಿದ್ದ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದವರ ಮೇಲೆ ಪ್ರಕರಣ ದಾಖಲಿಸದೇ ಸೆಕ್ಯೂಲರ್ ಬಗ್ಗೆ ಮಾತನಾಡಿತ್ತಿದ್ದಾರೆ ಎಂದು ಕಿಡಿಕಾರಿದರು.

ಸಚಿವ ಎನ್.ಚಲುವರಾಯಸ್ವಾಮಿ ಅವರು ಸ್ಟಾರ್ ಚಂದ್ರು ಬದಲಾಗಿ ಮಂಡ್ಯ ಲೋಕಸಭೆಯಲ್ಲಿ ಸ್ಪರ್ಧಿಸಿ ಗೆದ್ದು ತೋರಿಸಲಿ. ಈ ಬಾರಿ ಲೋಕಸಭೆಯಲ್ಲಿ ಜೆಡಿಎಸ್ ಸೋಲು ಅನುಭವಿಸಿದರೆ ಪುರಸಭಾ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಬಹಿರಂಗ ಸವಾಲು ಹಾಕಿದರು.

ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಯಾರೇ ಸ್ಪರ್ಧಿಸಿದರೂ ಎಲ್ಲರೂ ಒಗ್ಗಟ್ಟಾಗಿ ಮೈತ್ರಿ ಧರ್ಮ ಪಾಲಿಸಿ ಗೆಲ್ಲಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕುಮಾರಸ್ವಾಮಿ ಅವರ ಕೈ ಬಲ ಪಡಿಸುತ್ತೇವೆ ಎಂದರು.

ಪುರಸಭೆ ಸದಸ್ಯ ಕೃಷ್ಣಪ್ಪ ಮಾತನಾಡಿ, ಎಚ್.ಡಿ.ಕುಮಾರಸ್ವಾಮಿ ಅವರು ಅನಾರೋಗ್ಯ ನಿಮಿತ್ತ ಶಸ್ತ್ರ ಚಿಕಿತ್ಸೆಗೊಳಗಾಗಲು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರ ಆರೋಗ್ಯ ವೃದ್ಧಿಯಾಗಿ ಇನ್ನಷ್ಟು ಸೇವೆ ಬಡ ಜನರಿಗೆ ಸಿಗುವಂತಾಲಿ ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ಹೇಳಿದರು.

ಈ ವೇಳೆ ಜೆಡಿಎಸ್ ಯುವ ಘಟಕ ಅಧ್ಯಕ್ಷ ಕಡತನಾಳು ಸಂಜಯ್, ಪುರಸಭಾ ಸದಸ್ಯ ಎಸ್.ಟಿ ರಾಜು, ಮಾಜಿ ಸದಸ್ಯರಾದ ಸಾಯಿಕುಮಾರ್, ಕಾಯಿ ವೆಂಕಟೇಶ್, ಚಂದ್ರು, ನಗುವನಹಳ್ಳಿ ಶಿವಸ್ವಾಮಿ, ಗಂಜಾಂ ನಾರಾಯಣ, ನೆಲಮನೆ ಗುರುಪ್ರಸಾದ್ ಸೇರಿದಂತೆ ನೂರಾರು ಅಭಿಮಾನಿಗಳು ಇದ್ದರು.

ಎಚ್ಡಿಕೆ ಆರೋಗ್ಯ ಸುಧಾರಣೆಗೆ ಇಂದು ಪೂಜೆಮದ್ದೂರು:ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೃದಯ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ್ದು, ಮಾ.21ರಂದು ನಡೆಯುವ ಹೃದಯ ಚಿಕಿತ್ಸೆ ಯಶಸ್ವಿಯಾಗಿ ಎಚ್ಡಿಕೆ ಆರೋಗ್ಯದಲ್ಲಿ ಆರೋಗ್ಯ ಸುಧಾರಣೆಯಾಗಲಿ ಎಂದು ಪ್ರಾರ್ಥಿಸಿ ಪಕ್ಷದ ಅಭಿಮಾನಿಗಳು ಮತ್ತು ಕಾರ್ಯಕರ್ತರು, ಮುಖಂಡರು ಸೇರಿ ಮದ್ದೂರು ಪಟ್ಟಣದ ಶ್ರೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಂಡಿದ್ದಾರೆ.