ಸಾರಾಂಶ
ದೇಶದಲ್ಲಿ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್- ಎನ್‌ಡಿಎ ಮಿತ್ರ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಸಮನ್ವಯತೆಯಿಂದ ಕೆಲಸ ಮಾಡಿಕೊಂಡು ಹೋರಾಟ ನಡೆಸುತ್ತಿದ್ದೇವೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
ಎನ್‌ಡಿಎ ಮೈತ್ರಿಯಂತೆ ಪುರಸಭೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನವನ್ನು ಸಮನ್ವಯತೆಯಿಂದ ಜೆಡಿಎಸ್- ಬಿಜೆಪಿ ಪಕ್ಷಗಳ ನಾಯಕರು ಹಂಚಿಕೆ ಮಾಡಿಕೊಂಡು ಅಧಿಕಾರ ನಡೆಸಲಿದ್ದೇವೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.ಪಟ್ಟಣದ ಪುರಸಭೆ ನೂತನ ಅಧ್ಯಕ್ಷೆ ಜೆಡಿಎಸ್‌ನ ಜ್ಯೋತಿಲಕ್ಷ್ಮಿಬಾಬು ಹಾಗೂ ಉಪಾಧ್ಯಕ್ಷ ಬಿಜೆಪಿಯ ಎಲ್.ಅಶೋಕ್ ಅವರ ಕಚೇರಿ ಉದ್ಘಾಟನೆ ಹಾಗೂ ಅಧಿಕಾರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದಲ್ಲಿ ಮೋದಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್- ಎನ್‌ಡಿಎ ಮಿತ್ರ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಸಮನ್ವಯತೆಯಿಂದ ಕೆಲಸ ಮಾಡಿಕೊಂಡು ಹೋರಾಟ ನಡೆಸುತ್ತಿದ್ದೇವೆ ಎಂದರು.ಎನ್‌ಡಿಎ ಮೈತ್ರಿ ನಂತರ ಭ್ರಷ್ಟ ಟಾಕಾಂಗ್ರೆಸ್ ಪಕ್ಷದ ಆಡಳಿತ ವಿರುದ್ಧ ಬಿಜೆಪಿಯ ವಿಜಯೇಂದ್ರ ಹಾಗೂ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದ ಪಾದಯಾತ್ರೆ ಯಶಸ್ವಿಯಾಗಿದೆ. ಕಾಂಗ್ರೆಸ್ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.
ಮುಂದಿನ ದಿನಗಳಲ್ಲಿ ಪುರಸಭೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇತೃತ್ವದಲ್ಲಿ ಎಲ್ಲ ಸದಸ್ಯರ ಸಹಕಾರ ಪಡೆದ ಸ್ಥಳೀಯ ಶಾಸಕರು, ಸಂಸದ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಸಹಕಾರ ಪಡೆದು ಪಟ್ಟಣದ ಎಲ್ಲಾ ವಾರ್ಡ್ ಗಳನ್ನು ಅಭಿವೃದ್ಧಿ ಮಾಡಿ ಮಾದರಿ ಪಟ್ಟಣವಾಗಿಸಲು ಕೆಲಸ ಮಾಡುವಂತೆ ಸಲಹೆ ನೀಡಿದರು.ಈ ವೇಳೆ ಪುರಸಭೆ ನೂತನ ಅಧ್ಯಕ್ಷೆ ಜ್ಯೋತಿಲಕ್ಷ್ಮಿಬಾಬು, ಉಪಾಧ್ಯಕ್ಷ ಎಲ್.ಅಶೋಕ್, ಜೆಡಿಎಸ್‌ಅಧ್ಯಕ್ಷ ಎಸ್.ಎ.ಮಲ್ಲೇಶ್, ಬಿಜೆಪಿ ಅಧ್ಯಕ್ಷ ಧನಂಜಯ್, ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್, ಮನ್ಮುಲ್ ಮಾಜಿ ಅಧ್ಯಕ್ಷ ವೈರಮುಡಿಗೌಡ, ಪಿಎಲ್ ಡಿ ಬ್ಯಾಂಕ್ ನಿರ್ದೇಶಕಿ ರತ್ನಮ್ಮ, ಪುರಸಭೆ ಸದಸ್ಯರಾದ ಸೋಮಶೇಖರ್, ಯಶ್ವಂತ್ , ಚಂದ್ರು, ಶಿವಕುಮಾರ್, ಜಯಲಕ್ಷಮ್ಮ, ಧನಲಕ್ಷ್ಮಿ, ಗೀತಾ ಸೇರಿದಂತೆ ಹಲವು ಮುಖಂಡರು ಹಲವರು ಹಾಜರಿದ್ದರು.