ಜೆಡಿಎಸ್‌ ಪಕ್ಷ ಹಾಗೂ ತಮ್ಮ ಕುಟುಂಬ ಸದಸ್ಯರಲ್ಲಿ 40 ಜನರ ಫೋನ್‌ ಟ್ಯಾಪ್‌ ಆಗ್ತಿದೆ ಎಂದು ಎಚ್‌ಡಿಕೆ ಸ್ಫೋಟಕ ಆರೋಪ ಮಾಡಿದ್ದು, ಪ್ರಜ್ವಲ್‌ನಿಂದ ತಪ್ಪಾಗಿದ್ದರೆ ಕ್ಷಮೆ ಕೇಳ್ತೀನಿ ಎಂಬುದಾಗಿಯೂ ಅಚ್ಚರಿಯ ರೀತಿಯಲ್ಲಿ ಎಚ್‌ಡಿಕೆ ಪ್ರತಿಕ್ರಿಯಿಸಿದ್ದಾರೆ.  

 ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಮತ್ತೆ ದೂರವಾಣಿ ಕದ್ದಾಲಿಕೆ ಆರೋಪ ಕೇಳಿಬಂದಿದೆ. ಸಂಸದ ಪ್ರಜ್ವಲ್‌ ರೇವಣ್ಣ ರಾಸಲೀಲೆ ವಿಡಿಯೋ ಪ್ರಕರಣ ಸಂಬಂಧ ತಮ್ಮ ಸುತ್ತಮುತ್ತಲಿನ 40 ಜನರ ಫೋನ್‌ಗಳನ್ನು ರಾಜ್ಯ ಸರ್ಕಾರ ಕದ್ದಾಲಿಕೆ ಮಾಡುತ್ತಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದು, ಕುಮಾರಸ್ವಾಮಿ ಹಾಗೂ ಅವರ ಕುಟುಂಬದ ಫೋನ್‌ ಟ್ಯಾಪಿಂಗ್‌ ಮಾಡುವ ಮುಠ್ಠಾಳತನದ ಕೆಲಸವನ್ನು ನಾವು ಮಾಡುವುದಿಲ್ಲ.

ಅವರು ಪ್ರಚಾರಕ್ಕಾಗಿ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ. ಈ ನಡುವೆ, ಹಾಗೆಲ್ಲಾ ಕದ್ದಾಲಿಕೆ ಮಾಡಲು ಬರುವುದಿಲ್ಲ.

ಕುಮಾರಸ್ವಾಮಿ ಅವರ ಬಳಿ ಮಾಹಿತಿ ಇದ್ದರೆ ಮಾಹಿತಿ ಕೊಡಲಿ, ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ.