ಹೆಚ್‌ಡಿಕೆಗೆ ಮತ್ತೆ ರಾಜ್ಯದ ಅಧಿಕಾರ ಸಿಗಲಿ: ರಾಮಚಂದ್ರ

| Published : Dec 17 2023, 01:45 AM IST

ಹೆಚ್‌ಡಿಕೆಗೆ ಮತ್ತೆ ರಾಜ್ಯದ ಅಧಿಕಾರ ಸಿಗಲಿ: ರಾಮಚಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಸಿಎಂ ಹುಟ್ಟುಹಬ್ಬಕ್ಕೆ ವಿದ್ಯಾಗಣಪತಿ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ । ಜಿಲ್ಲಾ ಆಸ್ಪತ್ರೆ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

- ಮಾಜಿ ಸಿಎಂ ಹುಟ್ಟುಹಬ್ಬಕ್ಕೆ ವಿದ್ಯಾಗಣಪತಿ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ । ಜಿಲ್ಲಾ ಆಸ್ಪತ್ರೆ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

ಕನ್ನಡಪ್ರಭ ವಾರ್ತೆ, ಮಂಡ್ಯ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜಕೀಯ ಶಕ್ತಿ ತುಂಬುವ ಮೂಲಕ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗುವ ಅವಕಾಶ ಸಿಗಲಿ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಬಿ.ಆರ್. ರಾಮಚಂದ್ರ ಹೇಳಿದರು.

ವಿದ್ಯಾಗಣಪತಿ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ, ಜಿಲ್ಲಾ ಆಸ್ಪತ್ರೆ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಹಾಗೂ ಮಮತೆಯ ಮಡಿಲು ಆಶ್ರಯದಲ್ಲಿ ರೋಗಿಗಳ ಸಂಬಂಧಿಕರಿಗೆ ಊಟ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಲೂಕಿನ ಕೆರಗೋಡು ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲೂ ಸಹ ಎಚ್ಡಿ.ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಜೆಡಿಎಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.

ಮನ್‌ಮುಲ್ ಉಪಾಧ್ಯಕ್ಷ ಎಂ.ಎಸ್.ರಘುನಂದನ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬವನ್ನು ಜಿಲ್ಲೆಯಾದ್ಯಂತ ವಿವಿಧ ಸೇವಾ ಕಾರ್ಯಕ್ರಮ ಮೂಲಕ ಹುಟ್ಟುಹಬ್ಬ ಆಚರಿಸಲಾಗುತ್ತಿದೆ ಎಂದರು.

ಮುಂದಿನ ದಿನಗಳಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರ ರಚನೆ ಮಾಡುವ ಮೂಲಕ ಮುಖ್ಯಮಂತ್ರಿ ಆಗುವ ಅವಕಾಶ ಲಭಿಸಲಿ. ರೈತರ ಕಷ್ಟ ಕಾರ್ಪಣ್ಯಗಳನ್ನು ಈಡೇರಿಸುವಂತಾಗಲಿ ಎಂದು ಹೇಳಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮಾಜಿ ಶಾಸಕರಾದ ಜಿ.ಬಿ.ಶಿವಕುಮಾರ್, ಕೆ.ಟಿ. ಶ್ರೀಕಂಠೇಗೌಡ, ಜೆಡಿಎಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಸಾತನೂರು ಜಯರಾಮ್, ನಗರಸಭಾ ಸದಸ್ಯ ನಾಗೇಶ, ರಜನಿ, ಮುಖಂಡರಾದ ವಸಂತ್‌ರಾಜು, ಮೋಹನ್, ಪ್ರತಾಪ್, ಬಿ.ಆರ್.ಸುರೇಶ್, ರಮೇಶ್, ಮಂಜುನಾಥ್, ಸುಜಾತಮಣಿ ಇತರರಿದ್ದರು.