ಅಧಿಕಾರದ ಬಾಗಿಲು ಮುಚ್ಚುವುದು ಎಚ್ಡಿಕೆ ಕುಟುಂಬದ ವಾಡಿಕೆ: ಮರಿತಿಬ್ಬೇಗೌಡ ಆರೋಪ

| Published : Apr 05 2024, 01:01 AM IST

ಅಧಿಕಾರದ ಬಾಗಿಲು ಮುಚ್ಚುವುದು ಎಚ್ಡಿಕೆ ಕುಟುಂಬದ ವಾಡಿಕೆ: ಮರಿತಿಬ್ಬೇಗೌಡ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ರೈತ ವಿರೋಧಿ ಕಾಯ್ದೆಗೆ ಮತ ನೀಡಲು ನನ್ನ ಆತ್ಮಸಾಕ್ಷಿ ಒಪ್ಪದೇ ವಿರೋಧಿಸಿದೆ. ನಾನು ರೈತರ ಮಗ . ನಾಲ್ಕು ಬಾರಿ ಶಾಸಕನಾಗಿ ಸೇವೆ ಸಲ್ಲಿಸಿದ್ದೇನೆ. ಕುಮಾರಸ್ವಾಮಿ ಅವರ ಕುಟುಂಬ ರಾಜಕಾರಣವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಚುನಾವಣೆ ಮುಗಿದ ಕೂಡಲೇ ಅಧಿಕಾರದ ಬಾಗಿಲನ್ನು ಮುಚ್ಚುವುದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬದ ವಾಡಿಕೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಆರೋಪಿಸಿದರು.

ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರೊಂದಿಗೆ ತಾಲೂಕಿನ ವಿವಿಧ ಮಠಗಳಿಗೆ ಭೇಟಿ ನೀಡಿ, ಆಶೀರ್ವಾದ ಪಡೆದ ನಂತರ ಬಿ.ಜಿ.ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾರ್ಯಕರ್ತರನ್ನು ಮರೆತ ಪಕ್ಷ ಎಂದರೆ ಅದು ಜೆಡಿಎಸ್. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಮುಖ್ಯಮಂತ್ರಿಯಾಗಿದ್ದವರು ತಮ್ಮ ಕಾರ್ಯಕರ್ತರಿಗೆ ಅಧಿಕಾರ ಕೊಡಿಸಿದ್ದರು. ಆದರೆ, ಸ್ಥಳೀಯವಾಗಿ ಅಧಿಕಾರ ಕೊಡಿಸಿಲ್ಲ ಎಂದು ದೂರಿದರು.

ಬಿಜೆಪಿ ಹಾಗೂ ಜೆಡಿಎಸ್ ಎರಡು ಪಕ್ಷಗಳೊಂದಿಗೆ ಉಪ ಸಭಾಪತಿಯಾಗಿ ಗೌರವಯುತ ಸ್ಥಾನಕ್ಕೆ ನ್ಯಾಯ ಒದಗಿಸಿದ್ದೇನೆ. ಉಪ ಸಭಾಪತಿ ಮಾಡಿದ್ದಾರೆ ಎಂದಾಕ್ಷಣ ಅವರ ತೀರ್ಮಾನಗಳನ್ನು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ ಎಂದು ಹೇಳಿದರು.

ರೈತ ವಿರೋಧಿ ಕಾಯ್ದೆಗೆ ಮತ ನೀಡಲು ನನ್ನ ಆತ್ಮಸಾಕ್ಷಿ ಒಪ್ಪದೇ ವಿರೋಧಿಸಿದೆ. ನಾನು ರೈತರ ಮಗ . ನಾಲ್ಕು ಬಾರಿ ಶಾಸಕನಾಗಿ ಸೇವೆ ಸಲ್ಲಿಸಿದ್ದೇನೆ. ಕುಮಾರಸ್ವಾಮಿ ಅವರ ಕುಟುಂಬ ರಾಜಕಾರಣವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ಕ್ಷೇತ್ರಕ್ಕೆ ಬೇಕಾದ ನೀರಾವರಿ, ಶಿಕ್ಷಣ, ಆರೋಗ್ಯ ಸೇರಿ ಕ್ಷೇತ್ರದ ಅಭಿವೃದ್ಧಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ತಂದಿದ್ದೇನೆ. ಅವರ ಅಧಿಕಾರದ ಅವಧಿಯಲ್ಲಿ ಏನೇನು ತಂದುಕೊಟ್ಟಿದ್ದಾರೆಂದು ಮೊದಲು ಮಾಹಿತಿ ನೀಡಲಿ ಎಂದರು.

ನಾನು ತಂದಂತಹ ಒಂದು ಯೋಜನೆಯನ್ನು ಪೂರ್ಣಗೊಳಿಸಲು ಸಾಧ್ಯವಾಗದವರು ಯಾರನ್ನೋ ಮೆಚ್ಚಿಸಿಕೊಳ್ಳಲು ಮಾತನಾಡುತ್ತಾರೆ. ಕ್ಷೇತ್ರದ ಜನರೇ ಅವರನ್ನು ಮರೆಯುತ್ತಿರುವಾಗ ನಾನೇಕೆ ಅವರ ಬಗ್ಗೆ ಮಾತನಾಡಲಿ ಎಂದರು.

ಲೋಕಸಭಾ ಚುನಾವಣೆಯಲ್ಲಿ ಎದುರಾಳಿಯನ್ನು ಛೇಡಿಸುವುದು ಮತ್ತು ಟೀಕೆ ಮಾಡುವುಕ್ಕೆ ಹೋಗುವುದಿಲ್ಲ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿ. ಬರಗಾಲದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ನೆಮ್ಮದಿಯ ಬದುಕು ಸಾಧಿಸುತ್ತಿರುವ ಗ್ರಾಮೀಣ ಜನರು, ಕಾಂಗ್ರೆಸ್ ಪಕ್ಷವನ್ನು ಕೈ ಹಿಡಿಯುತ್ತಾರೆಂಬ ನಂಬಿಕೆ ಇದೆ ಎಂದು ಹೇಳಿದರು.

ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಜಿಪಂ ಸದಸ್ಯ ಮಾಜಿ ಸದಸ್ಯ ಆರ್.ಎನ್.ವಿಶ್ವಾಸ್, ಎಪಿಎಂಸಿ ಮಾಜಿ ಅಧ್ಯಕ್ಷ ಮುಟ್ಟನಹಳ್ಳಿ ಅಂಬರೀಶ್, ತಾಪಂ ಮಾಜಿ ಅಧ್ಯಕ್ಷ ಕುಂದೂರು ಪ್ರಕಾಶ್, ಟಿಎಪಿಸಿಎಂಎಸ್ ನಿರ್ದೇಶಕ ಕೆ.ಎಸ್.ದ್ಯಾಪೇಗೌಡ, ಮುಖಂಡರಾದ ಬಂಕ್ ಮಹದೇವು, ಮುಖಂಡರಾದ ಮಹೇಶ್, ಅನಿಲ್ ಕುಮಾರ್, ಅಮೃತ್ ಶ್ರೀಕಂಠು, ಪ್ರಭುಸ್ವಾಮಿ ಇದ್ದರು.