ಸಾಕ್ಷಿಗುಡ್ಡೆ ಕೇಳಿದ ಡಿಕೆಶಿ ಉತ್ತರ ಕೊಟ್ಟ ಎಚ್ಡಿಕೆ

| Published : Nov 05 2024, 01:41 AM IST

ಸಾಕ್ಷಿಗುಡ್ಡೆ ಕೇಳಿದ ಡಿಕೆಶಿ ಉತ್ತರ ಕೊಟ್ಟ ಎಚ್ಡಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನಪಟ್ಟಣ: ನಾನು ಮಾಡಿದ ಕೆಲಸ ಸಾಕ್ಷಿಗುಡ್ಡೆಗಳು ಕಣ್ಣಿಗೆ ಕಾಣುತ್ತಿವೆ, ನೀವು ಲೂಟಿ ಹೊಡೆದು ಕಳಿಸಿದ ಕಲ್ಲುಬಂಡೆಗಳ ಸಾಕ್ಷಿಗುಡ್ಡೆಗಳು ವಿದೇಶದಲ್ಲಿವೆ ಎಂದು ಕೆಲಸಗಳ ಸಾಕ್ಷಿಗುಡ್ಡೆ ಕೇಳಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ತಿರುಗೇಟು ನೀಡಿದರು.

ಚನ್ನಪಟ್ಟಣ: ನಾನು ಮಾಡಿದ ಕೆಲಸ ಸಾಕ್ಷಿಗುಡ್ಡೆಗಳು ಕಣ್ಣಿಗೆ ಕಾಣುತ್ತಿವೆ, ನೀವು ಲೂಟಿ ಹೊಡೆದು ಕಳಿಸಿದ ಕಲ್ಲುಬಂಡೆಗಳ ಸಾಕ್ಷಿಗುಡ್ಡೆಗಳು ವಿದೇಶದಲ್ಲಿವೆ ಎಂದು ಕೆಲಸಗಳ ಸಾಕ್ಷಿಗುಡ್ಡೆ ಕೇಳಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ತಿರುಗೇಟು ನೀಡಿದರು.

ಚುನಾವಣಾ ಪ್ರಚಾರದ ನಡುವೆ ದೊಡ್ಡನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಚನ್ನಪಟ್ಟಣ ಬಿಟ್ಟು ಹೋಗುವುದು ಒಳಿತು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅದನ್ನು ಅವರು ಹೇಳುವುದಲ್ಲ, ಚನ್ನಪಟ್ಟಣದ ಜನರು ಹೇಳಬೇಕು, ಯಾರು ಹೊರಗೆ ಹೋಗಬೇಕು ಎನ್ನುವುದನ್ನು ಅವರು ತೀರ್ಮಾನ ಮಾಡುತ್ತಾರೆ ಎಂದರು.

ಯಾವ ರೀತಿ ಸಾಕ್ಷಿಗುಡ್ಡೆ ಬೇಕು ಅವರಿಗೆ? ಆ ವ್ಯಕ್ತಿಗೆ ಸಾಕ್ಷಿಗುಡ್ಡೆ ಅರ್ಥ ಗೊತ್ತಿದೆಯಾ? ಕಾನೂನು ಬಾಹಿರವಾಗಿ ಕಲ್ಲು ಬಂಡೆಗಳನ್ನು ಲೂಟಿ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ. ಆ ಸಾಕ್ಷಿಗುಡ್ಡೆನಾ? ರಾಜ್ಯದ ಪ್ರಾಕೃತಿಕ ಸಂಪತ್ತು ಲೂಟಿ ಮಾಡಿದ ಬಗ್ಗೆ ಸಾಕ್ಷಿಗುಡ್ಡೆ ನೀಡಬೇಕಾಗಿತ್ತಾ ಎಂದು ಖಾರವಾಗಿ ಉತ್ತರಿಸಿದರು.

ಅವರ ಸಾಕ್ಷಿಗುಡ್ಡೆ ಏನು ಎನ್ನುವುದನ್ನು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ ಅವರನ್ನು ಕೇಳಿದರೆ ಹೇಳುತ್ತಾರೆ. ಅವರ ಅಣ್ಣ ತಮ್ಮಂದಿರು ಚನ್ನಪಟ್ಟಣಕ್ಕೆ ಬಂದರೆ ಪೊರಕೆಯಲ್ಲಿ ಹೊಡೆಯುತ್ತಾರೆ ಅಂತ ಹೇಳಿದ್ದರು. ಇದಕ್ಕಿಂತಾ ಅವರ ಸಾಕ್ಷಿಗುಡ್ಡೆ ಬೇಕಾ? ಸಾತನೂರು ಕ್ಷೇತ್ರದಲ್ಲಿದ್ದ ಗ್ರಾಮಗಳಲ್ಲಿ ಅವರು ಏನು ಕೆಲಸ ಮಾಡಿದ್ದಾರೆ. ಅದನ್ನು ಈವರೆಗೂ ತಾಲೂಕು ಕೇಂದ್ರ ಮಾಡಲು ಆಗಲಿಲ್ಲ ಎಂದು ಡಿಕೆ ಸಹೋದರರ ವಿರುದ್ಧ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಬಾಕ್ಸ್‌.............

ವಕ್ಫ್ ವಿವಾದ: ಕಾಂಗ್ರೆಸ್‌ ಸರ್ಕಾರಕ್ಕೆ ಎಚ್ಚರಿಕೆ

- ಸಿಎಂ, ಡಿಸಿಎಂ, ಸಚಿವರ ಮನೆಗಳಿಗೆ ರೈತರು ನುಗ್ಗುವ ದಿನಗಳು ದೂರವಿಲ್ಲ

- ಒಂದು ಸಮುದಾಯವನ್ನು ಚಿವುಟುತ್ತೀರಾ, ಮತ್ತೊಂದು ಸಮುದಾಯದ ತೊಟ್ಟಿಲು ತೂಗುತ್ತಿರಾ

ಚನ್ನಪಟ್ಟಣ: ವಕ್ಫ್ ವಿವಾದವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಆದಷ್ಟು ಬೇಗ ಸರಿ ಮಾಡದಿದ್ದರೆ ರೈತರೇ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರ ಮನೆಗಳಿಗೆ ನುಗ್ಗುವ ದಿನಗಳು ದೂರವಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಚುನಾವಣಾ ಪ್ರಚಾರದ ನಡುವೆ ದೊಡ್ಡನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಷ್ಟು ದಿನ ಜನರಿಗೆ ಹೀಗೆ ಮೋಸ ಮಾಡುತ್ತೀರಾ. ಒಂದು ಸಮುದಾಯವನ್ನು ಚಿವುಟುತ್ತೀರಾ? ಮತ್ತೊಂದು ಸಮುದಾಯದ ತೊಟ್ಟಿಲು ತೂಗುತ್ತಿರಾ? ಜನರಲ್ಲಿ ಕ್ಷಮೆ ಕೇಳಿ ಸರಿ ಮಾಡಿಕೊಳ್ಳಿ. ಇಲ್ಲವಾದರೆ ಜನರೇ ನಿಮ್ಮ ಮನೆಗಳಿಗೆ ನುಗ್ಗುವ ಕಾಲ ದೂರವಿಲ್ಲ ಎಂದರು.

ಮೊನ್ನೆ ಮೊನ್ನೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರೊಬ್ಬರು ರಾಜ್ಯಪಾಲರ ಮನೆಗೆ ಬಾಂಗ್ಲಾ ದೇಶದ ಪ್ರಧಾನಿ ಮನೆಗೆ ಜನ ನುಗ್ಗಿದಂತೆ ನುಗ್ಗುತ್ತಾರೆ ಅಂದಿದ್ದರು. ಅದೇ ಪರಿಸ್ಥಿತಿ ನಿಮಗೂ ಬಂದರೂ ಅಚ್ಚರಿ ಇಲ್ಲ. ರೈತರ ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದು ಎಚ್ಚರಿಕೆ ಕೊಟ್ಟರು.

ನಾನು ಸಿಎಂ ಆಗಿದ್ದ ಅವಧಿಯಲ್ಲಿ ನನ್ನ ಮುಂದೆ ಯಾವುದೇ ವಕ್ಫ್ ಕಡತ ಬಂದಿರಲಿಲ್ಲ. ಕುಮಾರಸ್ವಾಮಿ, ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಅವರ ಕಾಲದಲ್ಲೂ ವಕ್ಫ್ ತೀರ್ಮಾನ ಆಗಿದೆ ಸಿಎಂ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ಬೇಜಬ್ದಾರಿತನದ್ದು ಎಂದು ಕಿಡಿಕಾರಿದರು.

ರೈತರ ಭೂಮಿ‌ಯಾಗಲಿ, ಹಿಂದೂ ಮಠದ ಭೂಮಿಯಾಗಲಿ, ರಾಮನಗರದ ಗುಡ್ಡಬೆಟ್ಟವನ್ನು ವಕ್ಫ್ ಗೆ ನೀಡಲು ಯಾವುದೇ ಕಡತ ನನ್ನ ಬಳಿ ಬಂದಿರಲಿಲ್ಲ. ಯಾವ ದೃಷ್ಟಿಯಿಂದ ಸಿಎಂ ಅವರು ಹೇಳಿದ್ದಾರೋ ಗೊತ್ತಿಲ್ಲ. ಮಾಡಿರುವ ತಪ್ಪನ್ನು ಬೇರೆಯವರ ಮೇಲೆ ಹೊರೆಸಬೇಡಿ. ಒಂದು ವೇಳೆ ನಮ್ಮ ತಪ್ಪಿದ್ದರೆ ಜನರ ಮುಂದೆ ಇಡಿ ಎಂದು ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು.

ಒಂದು ವೇಳೆ ನನ್ನ ಕಾಲದಲ್ಲಿ ವಕ್ಫ್ ವಿಚಾರಕ್ಕೆ ಸಂಬಂಧಿಸಿ ಏನಾದರೂ ಆಗಿದ್ದರೆ ಅದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ. ಕಂದಾಯ ಸಚಿವರಾಗಿದ್ದವರು ಕೃಷ್ಣಭೈರೇಗೌಡರು, ವಕ್ಫ್ ಮಂತ್ರಿ ಆಗಿದ್ದವರು. ಈಗಿನ ವಕ್ಫ್ ಸಚಿವರೇ. ನನ್ನ ಗಮನಕ್ಕೆ ಬಾರದೆ ಅವರು ಮಾಡಿದ್ದರೆ ಅದಕ್ಕೂ ನಮಗೂ ಸಂಬಂಧ ಇಲ್ಲ. ನಾನು ಯಾವುದೇ ಕಾನೂನು ಬಾಹಿರ ಕೃತ್ಯಕ್ಕೆ ಅವಕಾಶ ಕೊಟ್ಟಿಲ್ಲ. ಇಂತಹ ವಿಚಾರದಲ್ಲಿ ನಾನು ರಾಜಕೀಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ವಿನಾಕಾರಣ ನನ್ನನ್ನು ಎಳೆಯುವುದಾದರೆ ಅದನ್ನು ಎದುರಿಸಲು ನಾನು ಸಿದ್ದನಿದ್ದೇನೆ. ಪಲಾಯನ ಮಾಡುವುದಿಲ್ಲ. ಸಿಎಂ ಆದವರು ಸುಳ್ಳು ಹೇಳಬಾರದು. ಸತ್ಯ ಹರಿಶ್ಚಂದ್ರನಂತೆ ''''''''ಸತ್ಯಮೇವ ಜಯತೇ'''''''' ಜಪ ಮಾಡುತ್ತಾರೆ. ದಿನವೂ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸ್ವಲ್ಪ ಜವಾಬ್ದಾರಿಯಿಂದ ಮಾತಾಡಬೇಕು. ಕಾಂಗ್ರೆಸ್ ಜನರನ್ನು ಧರ್ಮ, ಜಾತಿ ಹೆಸರಿನಲ್ಲಿ ಒಡೆದು ಅಳುತ್ತಿದೆ. ಇದು ಕಾಂಗ್ರೆಸ್ ಸರ್ವನಾಶದ ಕಾಲ. ಅದನ್ನು ಮಲ್ಲಿಕಾರ್ಜುನ ಖರ್ಗೆಯವರೇ ಹೇಳಿದ್ದಾರೆ. ಇವರ ನಡವಳಿಕೆಯಿಂದ ಕಾಂಗ್ರೆಸ್ ಸರ್ವನಾಶ ಆಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಸಿದರು.

4ಕೆಆರ್ ಎಂಎನ್ 3.ಜೆಪಿಜಿ

ಚನ್ನಪಟ್ಟಣ ಕ್ಷೇತ್ರದ ಮಲ್ಲಮಗೆರೆ ಗ್ರಾಮದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಚಾರ ನಡೆಸಿದರು.