ಸಾರಾಂಶ
- ನಮ್ಮಲ್ಲಿರುವ ವರದಿ ಜೊತೆ ತಾಳೆ ಹಾಕಿ ಚರ್ಚಿಸಿದ್ದೇವೆ
- ಮಂದಿರ ಉದ್ಘಾಟನೆ ಬಳಿಕ ಸೀಟು ಹಂಚಿಕೆ: ಜೆಡಿಎಸ್‌ಕನ್ನಡಪ್ರಭ ವಾರ್ತೆ ಬೆಂಗಳೂರುಕ್ಷೇತ್ರವಾರು ಪರಿಸ್ಥಿತಿಗಳ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬಳಿ ಸಮೀಕ್ಷಾ ವರದಿಗಳಿವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.ಗುರುವಾರ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಕೂಡ ಇದೇ ರೀತಿಯ ವರದಿಗಳನ್ನು ಸಿದ್ಧ ಮಾಡಿದ್ದೇವೆ. ಎರಡೂ ಕಡೆಯ ಮಾಹಿತಿಗಳು, ವರದಿಗಳ ಬಗ್ಗೆಯೂ ಸುದೀರ್ಘವಾಗಿ, ಮುಕ್ತವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚೆ ಮಾಡಿದ್ದೇವೆ. ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನ ಕಾರ್ಯಕ್ರಮ ಮುಗಿದ ಬಳಿಕ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಕ್ಷೇತ್ರಗಳ ಹಂಚಿಕೆ ಅಂತಿಮಗೊಳಿಸಲಾಗುವುದು ಎಂದರು.ನಮ್ಮ ಹಾಗೂ ನಮ್ಮ ಪಕ್ಷದ ನಡವಳಿಕೆಗಳನ್ನು ಬಿಜೆಪಿಯ ಕೇಂದ್ರ ನಾಯಕರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅವರ ನಂಬಿಕೆ, ವಿಶ್ವಾಸಕ್ಕೆ ಧಕ್ಕೆ ಬಾರದ ರೀತಿಯಲ್ಲಿ ನಾವೂ ನಡೆದುಕೊಳ್ಳುತ್ತೇವೆ. ಪರಸ್ಪರ ವಿಶ್ವಾಸ ಮತ್ತು ನಂಬಿಕೆಯ ತಳಹದಿ ಮೇಲೆ ಈ ಮೈತ್ರಿ ಚಿರಕಾಲ ಮುಂದುವರೆಯುತ್ತದೆ ಎಂದು ಇದೇ ವೇಳೆ ಕುಮಾರಸ್ವಾಮಿ ಹೇಳಿದರು.ಬಾಕ್ಸ್ ಕೇಂದ್ರ ಸಚಿವನಾಗುವ ಆಸಕ್ತಿ ಇಲ್ಲ: ಎಚ್‌ಡಿಕೆನಾನು ಕೇಂದ್ರ ಸಚಿವನಾಗುತ್ತೇನೆ ಎಂಬ ಸುದ್ದಿ ಎಲ್ಲಿಂದ, ಯಾವ ಕಾರಣಕ್ಕೆ ಹುಟ್ಟಿಕೊಂಡಿತು ಎಂಬುದು ಈಗಲೂ ನನಗೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಚುನಾವಣೆಗೆ ಎರಡು ತಿಂಗಳಷ್ಟೇ ಉಳಿದಿದೆ. ಈಗ ನಾನು ಸಚಿವನಾಗಿ ಮಾಡುವುದು ಏನಿದೆ? ಇಷ್ಟು ಅಲ್ಪಾವಧಿಯಲ್ಲಿ ರಾಜ್ಯಕ್ಕೆ, ರಾಷ್ಟ್ರಕ್ಕೆ ನಾನು ಏನು ಕೆಲಸ ಮಾಡಲು ಸಾಧ್ಯ? ಕೇಂದ್ರ ಸಚಿವನಾಗಬೇಕು ಎಂಬ ಆಸಕ್ತಿಯೂ ನನ್ನಲ್ಲಿ ಇಲ್ಲ. ನನಗಿರುವ ಉದ್ದೇಶ ಒಂದೇ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟ ರಾಜ್ಯದ 28 ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನೂ ಗೆಲ್ಲಬೇಕು. ಅದಷ್ಟೇ ನನ್ನ ಮುಂದಿರುವ ಏಕೈಕ ಅಜೆಂಡಾ ಎಂದರು.