ದಾವಣಗೆರೆ ನಗರದ ಶ್ರೀ ಕಲ್ಲೇಶ್ವರ ಮಿಲ್ ಆವರಣದಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕರಾಗಿದ್ದ ಲಿಂಗೈಕ್ಯ ಡಾ.ಶಾಮನೂರು ಶಿವಶಂಕರಪ್ಪ ಸಮಾಧಿಗೆ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಮುಖಂಡರ ಸಮೇತ ತೆರಳಿ ಪುಷ್ಪನಮನ ಸಲ್ಲಿಸಿ, ಪ್ರದಕ್ಷಿಣೆ ಹಾಕಿದರು.

- ದಾವಣಗೆರೆ ಧಣಿ ಎಸ್‌.ಎಸ್‌. ಮಕ್ಕಳು, ಕುಟುಂಬಕ್ಕೆ ಸಾಂತ್ವನ ಹೇಳಿದ ಕೇಂದ್ರ ಸಚಿವ - - -

ಕನ್ನಡಪ್ರಭ ವಾರ್ತೆ ದಾವಣಗೆರೆ ನಗರದ ಶ್ರೀ ಕಲ್ಲೇಶ್ವರ ಮಿಲ್ ಆವರಣದಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕರಾಗಿದ್ದ ಲಿಂಗೈಕ್ಯ ಡಾ.ಶಾಮನೂರು ಶಿವಶಂಕರಪ್ಪ ಸಮಾಧಿಗೆ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಮುಖಂಡರ ಸಮೇತ ತೆರಳಿ ಪುಷ್ಪನಮನ ಸಲ್ಲಿಸಿ, ಪ್ರದಕ್ಷಿಣೆ ಹಾಕಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಮಧ್ಯೆ ಹಾಗೂ ಮಕ್ಕಳ ಮಧ್ಯೆ ಉತ್ತಮ ಬಾಂಧವ್ಯವಿತ್ತು. ಎಸ್‌ಎಸ್‌ ಅಂತ್ಯಕ್ರಿಯೆಗೆ ಬರಲಾಗದ ಹಿನ್ನೆಲೆ ಎಚ್‌ಡಿಕೆ ಅವರು ನುಡಿನಮನದ ಮುನ್ನಾ ದಿನವಾದ ಗುರುವಾರ ಶಾಮನೂರು ಕ್ರಿಯಾ ಸಮಾಧಿಗೆ ಪುಷ್ಪಮಾಲೆ ಅರ್ಪಿಸಿ, ನಮಿಸಿದರು.

ಅನಂತರ ನೇರವಾಗಿ ಶಾಮನೂರು ನಿವಾಸ ಶಿವ ಪಾರ್ವತಿಗೆ ತಲುಪಿದರು. ಶಾಮನೂರು ಪುತ್ರರಾದ ಎಸ್‌.ಎಸ್. ಬಕ್ಕೇಶ್, ಎಸ್.ಎಸ್. ಗಣೇಶ್‌, ಎಸ್‌.ಎಸ್‌. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಮನೂರು ಪುತ್ರಿಯರು ಹಾಗೂ ಮಕ್ಕಳು, ಮೊಮ್ಮಕ್ಕಳು, ಕುಟುಂಬ ವರ್ಗಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದರು. ಇದೇ ವೇಳೆ ತಮ್ಮ ಹಾಗೂ ಶಾಮನೂರು ಕುಟುಂಬದ ಬಾಂಧವ್ಯವನ್ನು ಉಭಯ ಮುಖಂಡರು ಮೆಲುಕು ಹಾಕಿದರು.

ವಿಧಾನ ಪರಿಷತ್ತು ಸದಸ್ಯ ಭೋಜೇಗೌಡ, ಮಾಜಿ ಶಾಸಕ ಸಾ.ರಾ.ಮಹೇಶ, ಎಪಿಎಂಸಿ ಮಾಜಿ ಅಧ್ಯಕ್ಷ ಎನ್.ಜಿ. ಪುಟ್ಟಸ್ವಾಮಿ ಇತರರು ಇದ್ದರು.

- - -

(ಟಾಪ್‌ ಕೋಟ್‌)

ಇತ್ತೀಚಿನ ದಿನಗಳಲ್ಲಿ ರಾತ್ರಿವೇಳೆ ರಸ್ತೆ ಅಪಘಾತಗಳು ಹೆಚ್ಚುತ್ತಿವೆ. ನಿರೀಕ್ಷೆಗೂ ಮೀರಿ ಸಾವು, ನೋವು ಸಂಭವಿಸುತ್ತಿವೆ. ಬುಧವಾರ ತಡರಾತ್ರಿ ಚಿತ್ರದುರ್ಗ ಜಿಲ್ಲೆಯಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡು, ಅಮಾಯಕ ಜೀವಗಳು ಬಲಿಯಾಗಿರುವುದು ನೋವು ತಂದಿದೆ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ. ಬಸ್‌ ಮಾಲೀಕರಿಗೆ ಸರ್ಕಾರ ಕೆಲವೊಂದಿಷ್ಟು ಮಾರ್ಗಸೂಚಿ ಅಳವಡಿಸಬೇಕು. ಅಪಘಾತದ ಸಂದರ್ಭದಲ್ಲಿ ಸುಲಭವಾಗಿ ಹೊರಬರಲು ಸೂಕ್ತವಾದ ಸೇಫ್ಟಿ ಕ್ರಮ ಕೈಗೊಳ್ಳಬೇಕು.

- ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ.

- - -

-25ಕೆಡಿವಿಜಿ2.ಜೆಪಿಜಿ: ದಾವಣಗೆರೆ ಶ್ರೀ ಕಲ್ಲೇಶ್ವರ ಮಿಲ್ ಆವರಣದಲ್ಲಿ ಲಿಂಗೈಕ್ಯ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿಗೆ ಕೇಂದ್ರದ ಸಚಿವ ಎಚ್.ಡಿ. ಕುಮಾರಸ್ವಾಮಿ ಪುಷ್ಪನಮನ ಸಲ್ಲಿಸಿದರು. -25ಕೆಡಿವಿಜಿ3.ಜೆಪಿಜಿ: ದಾವಣಗೆರೆಯಲ್ಲಿ ಶಾಮನೂರು ನಿವಾಸ ಶಿವ ಪಾರ್ವತಿಯಲ್ಲಿ ಲಿಂಗೈಕ್ಯ ಶಾಮನೂರು ಶಿವಶಂಕರಪ್ಪ ಭಾವಚಿತ್ರಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನಮಿಸಿದರು. -25ಕೆಡಿವಿಜಿ4.ಜೆಪಿಜಿ: ದಾವಣಗೆರೆ ಶಿವ ಪಾರ್ವತಿಯಲ್ಲಿ ಸ್ವಾಮೀಜಿಗಳು, ಎಸ್‌ಎಸ್‌ ಪುತ್ರರಾದ ಎಸ್.ಎಸ್.ಬಕ್ಕೇಶ್‌, ಎಸ್.ಎಸ್.ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ, ಶಾಮನೂರು ಪುತ್ರಿಯರು, ಕುಟುಂಬದೊಂದಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚರ್ಚೆ ನಡೆಸಿದರು.

-25ಕೆಡಿವಿಜಿ5.ಜೆಪಿಜಿ: ದಾವಣಗೆರೆ ಶಿವ ಪಾರ್ವತಿಯಲ್ಲಿ ಲಿಂಗೈಕ್ಯ ಶಾಮನೂರು ಶಿವಶಂಕರಪ್ಪ ಪುತ್ರ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಜೊತೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚರ್ಚೆ ನಡೆಸಿದರು.