ಮಾಜಿ ಸಿಎಂ, ಮಣ್ಣಿನ ಮಗ, ರೈತರ ಆಶಾಕಿರಣ ಕುಮಾರಸ್ವಾಮಿ ಅವರು ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ಕೈಗಾರಿಕಾ ಸಚಿವರಾಗಿ ಜನಪರ ಸೇವೆ ನೀಡುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಾಯಿ ಚಾಮುಂಡೇಶ್ವರಿ ಸಕಲ ಆಯುಷ್ಯ ಆರೋಗ್ಯ ಕೊಟ್ಟು ಕಾಪಾಡಲಿ.
ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ 66ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಪಕ್ಷದ ಮುಖಂಡರು ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿ ಸರಳವಾಗಿ ಆಚರಿಸಿದರು.ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜೆಡಿಎಸ್ ಮದ್ದೂರು ತಾಲೂಕು ಘಟಕದ ಅಧ್ಯಕ್ಷ ಚಿಕ್ಕತಿಮ್ಮೇಗೌಡರ ನೇತೃತ್ವದಲ್ಲಿ ಆಸ್ಪತ್ರೆ ರೋಗಿಗಳಿಗೆ ಉಚಿತವಾಗಿ ಹಣ್ಣು ಹಂಪಲು ವಿತರಿಸಿ ಅರ್ಥಪೂರ್ಣವಾಗಿ ಆಚರಣೆ ಮಾಡಿದರು.
ಈ ವೇಳೆ ಮಾತನಾಡಿದ ಚಿಕ್ಕತಿಮ್ಮೇಗೌಡರು. ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿ ಹರಿಕಾರರಾಗಿ ಇಂದಿಗೂ ಧೀನ ದಲಿತರ ಕಲ್ಯಾಣಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ದಣಿವರಿದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ದೇವರು ಆಯುಷ್ಯ ಅರೋಗ್ಯ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.ಮುಂದಿನ ದಿನಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದು ಮತ್ತೆ ಕುಮಾರಸ್ವಾಮಿ ಮುಖ್ಯಮಂತ್ರಿ ಹುದ್ದೆಗೇರಿ ರಾಜ್ಯದ ಅಭಿವೃದ್ಧಿ ಮಾಡಬೇಕು ಎಂದು ಹಾರೈಸಿದರು.
ಜೆಡಿಎಸ್ ಯುವ ಮುಖಂಡ ಮೆಳ್ಳಹಳ್ಳಿ ಶ್ರೀನಿವಾಸ್ ಮಾತನಾಡಿ, ಮಾಜಿ ಸಿಎಂ, ಮಣ್ಣಿನ ಮಗ, ರೈತರ ಆಶಾಕಿರಣ ಕುಮಾರಸ್ವಾಮಿ ಅವರು ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ಕೈಗಾರಿಕಾ ಸಚಿವರಾಗಿ ಜನಪರ ಸೇವೆ ನೀಡುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಾಯಿ ಚಾಮುಂಡೇಶ್ವರಿ ಸಕಲ ಆಯುಷ್ಯ ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಹಾರೈಸಿದರು.ಈ ವೇಳೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಅರ್ಜುನ್ ಕುಮಾರ್, ಜೆಡಿಎಸ್ ಮುಖಂಡರಾದ ಅಣ್ಣೂರು ವಿನು, ರಘುವೆಂಕಟಗೌಡ, ಕರಡಕೆರೆ ಯೋಗೇಶ್, ಅಣ್ಣೂರು ಯೋಗೇಂದ್ರ, ಸಂತೋಷ್, ಕಾರ್ಕಳ್ಳಿ ಗ್ರಾಪಂ ಸದಸ್ಯ ಮಹೇಶ್, ಜಗದೀಶ್, ಟಿಬಿ ಹಳ್ಳಿ ಸ್ವಾಮಿ, ಬೊಪ್ಪಸಮುದ್ರ ಗೌರೀಶ, ರಾಮಲಿಂಗ, ರಾಜೇಶ್ ಸೇರಿದಂತೆ ಹಲವರು ಮುಖಂಡರು ಉಪಸ್ಥಿತರಿದ್ದರು.