ಸಾರಾಂಶ
ಶುಕ್ರವಾರದ ಜನತಾದರ್ಶನ ಕಾರ್ಯಕ್ರಮ ಬೆಳಗ್ಗೆಯಿಂದ ಸಂಜೆಯವರೆಗೆ ನಡೆಯಲಿದೆ. ಕುಮಾರಸ್ವಾಮಿ ಅವರು ಸಂಜೆಯವರೆಗೂ ಜನಸಾಮಾನ್ಯರ ಜೊತೆಯಲ್ಲೇ ಇದ್ದು ಸಮಸ್ಯೆಗಳನ್ನು ಆಲಿಸಲಿದ್ದಾರೆ. ಅವರಿಗೆ ಮಂಡ್ಯ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದಾರೆ. ಸಚಿವರಾಗಿ ದೇಶದ ಕೆಲಸದ ಜೊತೆಗೆ ಮಂಡ್ಯದ ಜನರ ಋಣ ತೀರಿಸುವ ಕೆಲಸ ಮಾಡುವ ವಿಶ್ವಾಸ ಇದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಭಾರೀ ಬಹುಮತದೊಂದಿಗೆ ಸಂಸದ ಸ್ಥಾನಕ್ಕೆ ಆಯ್ಕೆ ಮಾಡಿರುವ ಜಿಲ್ಲೆಯ ಜನರ ನಿರೀಕ್ಷೆಯನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಎಂದಿಗೂ ಹುಸಿಗೊಳಿಸುವುದಿಲ್ಲ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.ನಗರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ (ಜು.4) ನಡೆಯಲಿರುವ ಸಂಸದ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಜನಸ್ಪಂದನ ಕಾರ್ಯಕ್ರಮದ ಪೂರ್ವಸಿದ್ಧತೆ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಶುಕ್ರವಾರದ ಜನತಾದರ್ಶನ ಕಾರ್ಯಕ್ರಮ ಬೆಳಗ್ಗೆಯಿಂದ ಸಂಜೆಯವರೆಗೆ ನಡೆಯಲಿದೆ. ಕುಮಾರಸ್ವಾಮಿ ಅವರು ಸಂಜೆಯವರೆಗೂ ಜನಸಾಮಾನ್ಯರ ಜೊತೆಯಲ್ಲೇ ಇದ್ದು ಸಮಸ್ಯೆಗಳನ್ನು ಆಲಿಸಲಿದ್ದಾರೆ. ಅವರಿಗೆ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದಾರೆ. ಸಚಿವರಾಗಿ ದೇಶದ ಕೆಲಸದ ಜೊತೆಗೆ ಮಂಡ್ಯದ ಜನರ ಋಣ ತೀರಿಸುವ ಕೆಲಸ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು.ನಾಲೆಗಳಿಗೆ ನೀರು ಬಿಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಸರ್ಕಾರ ತಕ್ಷಣವೇ ನಾಲೆಗಳಿಗೆ ನೀರು ಹರಿಸಬೇಕು. ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಕುಮಾರಸ್ವಾಮಿ ಅವರು ಮಾತನಾಡಿದ್ದು, ಯಾವುದೇ ಮುಲಾಜಿಲ್ಲದೆ ನೀರು ಬಿಡುವ ಕೆಲಸವಾಗುತ್ತದೆ. ರೈತರು ಆತಂಕಪಡುವುದು ಬೇಡ ಎಂದು ಖಡಕ್ಕಾಗಿ ಹೇಳಿದರು.
ಮೈಸೂರು ಮೂಡ ಹಗರಣ ವಿಚಾರದ ಬಗ್ಗೆ ಹೇಳಿದಾಗ, ಇದರ ಬಗ್ಗೆ ನನಗೆ ಮಾಹಿತಿ ಇಲ್ಲ. ಕಾನೂನು ಚೌಕಟ್ಟಿನಲ್ಲಿ ಯಾರೂ ದೊಡ್ಡವರಲ್ಲ. ಯಾರೇ ಇದರಲ್ಲಿ ಇದ್ದರೂ ಕ್ರಮವಾಗುತ್ತದೆ ಎಂದರಲ್ಲದೆ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆಕಾನೂನು ಬದ್ಧವಾಗಿ ನಾವು ಬಿಜೆಪಿ ಜೊತೆ ಸೇರಿ ವಿರೋಧ ಪಕ್ಷದವರಾಗಿ ಒತ್ತಾಯ ಮಾಡುವುದಾಗಿ ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಇದ್ದರು.