ಎಚ್‌ಡಿಕೆಗೆ ಅಸೂಯೆ, ಅದಕ್ಕೆ ಮದ್ದಿಲ್ಲ: ಡಿಕೆಶಿ

| Published : May 22 2024, 12:54 AM IST

ಸಾರಾಂಶ

ನನ್ನ ರಾಜೀನಾಮೆಗೆ ಆಸೆಪಡೋದು ಆತನ ತಪ್ಪಲ್ಲ. ಅವನ ಆಸೆ ಅವನದ್ದು ಎಂದು ಡಿಕೆಶಿಗೆ ಎಚ್‌ಡಿಕೆ ಏಕವಚನದಲ್ಲಿ ತಿರುಗೇಟು ನೀಡಿದ್ದಾರೆ,

ಕನ್ನಡಪ್ರಭ ವಾರ್ತೆ ಬೆಂಗಳೂರು

‘ಎಚ್.ಡಿ.ಕುಮಾರಸ್ವಾಮಿ ಅಸೂಯೆಗೆ ಮದ್ದಿಲ್ಲ. ಕಿಂಗ್‌ ಮೇಕರ್‌ ಆಗುವ ಕನಸು ಕಾಣುತ್ತಿದ್ದ ಆತನಿಗೆ ಜನರು 19 ಸ್ಥಾನ ನೀಡಿದ್ದರೆ, ನನ್ನ ಅಧ್ಯಕ್ಷತೆಗೆ 136 ಸ್ಥಾನ ನೀಡಿದ್ದಾರೆ. ಹೀಗಾಗಿ ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಕೈ ಹೊಸಕಿಕೊಳ್ಳುತ್ತಿದ್ದಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ.ಇದೇ ವೇಳೆ ತಮ್ಮ ರಾಜೀನಾಮೆಗೆ ಒತ್ತಾಯಿಸಿರುವ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ‘ನನ್ನ ರಾಜೀನಾಮೆಗೆ ಆಸೆ ಪಡುವುದು ಆತನ ತಪ್ಪು ಎಂದು ಹೇಳಲಾಗುವುದಿಲ್ಲ. ಪಾಪ ಅವನ ಆಸೆ ಅವನದ್ದು’ ಎಂದು ಏಕವಚನದಲ್ಲೇ ಕಿಡಿಕಾರಿದ್ದಾರೆ.

ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಮಂತ್ರಿ ದಿ.ರಾಜೀವ್‌ ಗಾಂಧಿ ಅವರ ಪುಣ್ಯ ಸ್ಮರಣಾರ್ಥ ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಮಂಜುನಾಥ್‌ ಗೌಡ ನೇತೃತ್ವದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಎಚ್‌.ಡಿ.ಕುಮಾರಸ್ವಾಮಿ ಕಿಂಗ್‌ಮೇಕರ್‌ ಆಗುತ್ತೇನೆ ಎಂದುಕೊಂಡಿದ್ದರು. ಆದರೆ ಜನರು ಆತನ ಅಧ್ಯಕ್ಷತೆಗೆ 19 ಸ್ಥಾನ ನೀಡಿ, ನನ್ನ ಅಧ್ಯಕ್ಷತೆಗೆ 136 ಸ್ಥಾನ ನೀಡಿದ್ದಾರೆ. ಹೀಗಾಗಿ ಅಧಿಕಾರ ಸಿಗದೆ ಕೈ ಕೈ ಹೊಸಕಿಕೊಳ್ಳುತ್ತಿದ್ದಾರೆ. ಅಸೂಯೆಗೆ ಎಲ್ಲಾದರೂ ಮದ್ದಿದೆಯೇ? ಶಕ್ತಿ ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾನು ರಾಜೀನಾಮೆ ಕೊಡಬೇಕು ಎಂದು ಅವರು ಆಸೆ ಪಡುವುದನ್ನು ನಾನು ತಪ್ಪು ಎಂದು ಹೇಳಲು ಆಗುತ್ತದೆಯೇ? ಎಂದು ಹೇಳಿದರು.

ಕಿಂಗಮೇಕರ್‌ ಆಗದ್ದಕ್ಕೆ ಕೈ ಹೊಸಕಿಕೊಳ್ತಿದ್ದಾರೆಕಿಂಗ್‌ ಮೇಕರ್‌ ಆಗುವ ಕನಸು ಕಾಣುತ್ತಿದ್ದ ಆತನಿಗೆ ಜನರು 19 ಸ್ಥಾನ ನೀಡಿದ್ದರೆ, ನನ್ನ ಅಧ್ಯಕ್ಷತೆಗೆ 136 ಸ್ಥಾನ ನೀಡಿದ್ದಾರೆ. ಹೀಗಾಗಿ ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಕೈ ಹೊಸಕಿಕೊಳ್ಳುತ್ತಿದ್ದಾರೆ. ಅಸೂಯೆಗೆ ಎಲ್ಲಾದರೂ ಮದ್ದಿದೆಯೇ? ಶಕ್ತಿ ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾತನಾಡಿಕೊಳ್ಳಲಿ ಎಂದು ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ.