ಅಕ್ಷರ ಸಂತ ಹರೇಕಳ ಹಾಜಬ್ಬಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗೌರವ!

| Published : Nov 24 2023, 01:30 AM IST

ಅಕ್ಷರ ಸಂತ ಹರೇಕಳ ಹಾಜಬ್ಬಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗೌರವ!
Share this Article
  • FB
  • TW
  • Linkdin
  • Email

ಸಾರಾಂಶ

ದಮ್ಮಾಮ್ಮ್‌ನಲ್ಲಿ ಕಾರ್ಯಕ್ರದಲ್ಲಿ ಪಾಲ್ಗೊಳ್ಳಲು ಮಂಗಳೂರಿನಿಂದ ತೆರಳುತ್ತಿದ್ದ ಅಕ್ಷರ ಸಂತ ಹರೇಕಳ ಹಾಜಬ್ಬಗೆ ಏರ್ರ್‌ ಇಂಡಿಯಾ ಎಕ್ಸ್ಕ್ಸ್‌ಪ್ರೆಸ್ಸ್‌ ಸಿಬ್ಬಂದಿಯಿಂದ ಗೌರವ

ಕನ್ನಡಪ್ರಭ ವಾರ್ತೆ ಮಂಗಳೂರು

ಅಕ್ಷರ ಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಮಾಮ್‌ಗೆ ಹೊರಡುವ ವೇಳ‍ೆ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಸಿಬ್ಬಂದಿ ಗೌರವಿಸಿದ್ದಾರೆ.

ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿನಿಂದ ದಮಾಮ್‌ಗೆ ಗುರುವಾರ ಏರ್ ಇಂಡಿಯ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ವಿಮಾನದೊಳಗೆ ಅಭಿನಂದಿಸಿ ಗೌರವಿಸಿದೆ.

ಹಾಜಬ್ಬ ಅವರು ಏರ್‌ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಪ್ರಯಾಣಿಸುತ್ತಿರುವುದನ್ನು ಗುರುತಿಸಿದ ಏರ್ ಇಂಡಿಯ ಎಕ್ಸ್ ಪ್ರೆಸ್‌ನ ಸಿಬ್ಬಂದಿ ವಿಮಾನದ ಕ್ಯಾಪ್ಟನ್ ನ ಗಮನಕ್ಕೆ ತಂದರು. ಕ್ಯಾಪ್ಟನ್ ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ, ‘ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬ ಸಂತೋಷ ತಂದಿದೆ. ಅವರಿಗೆ ಹೃದಯ ತುಂಬಿದ ಅಭಿನಂದನೆಗಳು ಎಂದು ಗೌರವ ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಹಾಜಬ್ಬ ಅವರು ಕೈಮುಗಿದು ವಂದಿಸುವ ವಿಡಿಯೋ ತುಣುಕು ವೈರಲ್‌ ಆಗಿದೆ. ಹಾಜಬ್ಬರ ಜತೆ ಮಂಗಳೂರಿನ ರಫೀಕ್‌ ಮಾಸ್ತರ್‌ ಹಾಗೂ ಉದ್ಯಮಿ ಫಾರೂಕ್‌ ಕನ್ಯಾನ ಇದ್ದರು.

--------------