ಸಾರಾಂಶ
ಕನ್ನಡಪ್ರಭ ವಾರ್ತೆ ಶಿರಾ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರು ನಾಗರೀಕ ದೇವೋಭವ ಎಂಬ ಅದ್ಭುತ ಘೋಷಣೆಯೊಂದಿಗೆ ಜಿಎಸ್ಟಿ ದರ ಕಡಿತಗೊಳಿಸುವ ಕ್ರಾಂತಿಕಾರಕ ಹೆಜ್ಜೆ ಇಟ್ಟು ನಿತ್ಯ ಬದುಕಿನ ಹೊರೆ ಇಳಿಸಿದ್ದಾರೆ ಎಂದು ಬಿಜೆಪಿ ಮಧುಗಿರಿ ಸಂಘಟನಾ ಜಿಲ್ಲಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ್ ಎಂ ಗೌಡ ಹೇಳಿದರು. ಅವರು ಬಿಜೆಪಿ ಮಧುಗಿರಿ ಸಂಘಟನಾ ಜಿಲ್ಲೆ ವತಿಯಿಂದ ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಮಧ್ಯಮ ವರ್ಗದವರು, ವ್ಯಾಪಾರಿಗಳು, ಯುವಕರು ಹಾಗೂ ಜನಸಾಮಾನ್ಯರು ಜಿಎಸ್ಟಿ ಕಡಿತದ ಲಾಭ ಪಡೆಯಲಿದ್ದು. ಜಿಎಸ್ಟಿ ಕಡಿತ ಮಾಡಿರುವ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ. ಎಲ್ಲರೂ ಖುಷಿಯಿಂದ ಸಂಭ್ರಮಿಸೋಣ ಎಂದರು. ಸ್ವಾತಂತ್ರ್ಯಪೂರ್ವದಲ್ಲಿ ಮಹಾತ್ಮ ಗಾಂಧೀಜಿ ಕರೆಕೊಟ್ಟಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ಕೊಟ್ಟಿದ್ದು, ದೇಶದ ಜನತೆ ವಿದೇಶಿ ವಸ್ತುಗಳ ಬಳಕೆ ಕಡಿಮೆ ಮಾಡಿ ನಮ್ಮ ದೇಸಿ ಉತ್ಪನ್ನಗಳನ್ನೇ ಹೆಚ್ಚು ಬಳಸಬೇಕು. ಇದರಿಂದ ದೇಶಿಯ ವಸ್ತುಗಳಿಗೂ ಬೇಡಿಕೆ ಹೆಚ್ಚುತ್ತದೆ ವಿದೇಶಿ ವಸ್ತುಗಳ ಆಮದು ಕಡಿಮೆಯಾಗುತ್ತದೆ ಎಂದರು. ಈ ಸಂದರ್ಭದಲ್ಲಿ ದಿಶಾ ಸಮಿತಿ ಸದಸ್ಯರಾದ ಮದಲೂರು ಮೂರ್ತಿ ಮಾಸ್ಟರ್, ನಗರ ಮಂಡಲ ಅಧ್ಯಕ್ಷರಾದ ಗಿರಿಧರ್, ನಿಕಟ ಪೂರ್ವ ಮಂಡಲ ಅಧ್ಯಕ್ಷರಾದ ಚಿಕ್ಕಣ್ಣ, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಮಂಜುನಾಥ್, ಉಪಾಧ್ಯಕ್ಷರಾದ ನಾಗರಾಜ್ ಗೌಡ, ಬಪ್ಪರಾಯಪ್ಪ, ರೈತ ಮೋರ್ಚಾ ಅಧ್ಯಕ್ಷರಾದ ಮದ್ದೆವಳ್ಳಿ ರಾಮಕೃಷ್ಣಪ್ಪ, ಇತರರಿದ್ದರು.