ಸಾರಾಂಶ
ಬೆಂಗಳೂರು : ರಾಜಧಾನಿ ಬೆಂಗಳೂರಿಗೆ ಪೂರೈಕೆಯಾಗುತ್ತಿರುವ ಕಾವೇರಿ ನೀರಿನ ದರ ಪರಿಷ್ಕರಣೆ ಕುರಿತು ರಾಜ್ಯ ಸರ್ಕಾರಕ್ಕೆ ಸೆಪ್ಟಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಪ್ರಸ್ತಾವನೆ ಸಲ್ಲಿಕೆ ಸಾಧ್ಯತೆ ಇದೆ.
ಬೆಂಗಳೂರು ಜಲಮಂಡಳಿಯು ಸಾರ್ವಜನಿಕರಿಗೆ ಪೂರೈಕೆ ಮಾಡುತ್ತಿರುವ ನೀರಿನ ದರವನ್ನು ಕಳೆದ 10 ವರ್ಷದಿಂದ ಪರಿಷ್ಕರಣೆ ಮಾಡಿಲ್ಲ. ಇದೀಗ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೀರಿನ ದರ ಪರಿಷ್ಕರಣೆಗೆ ಮುಂದಾಗಿದ್ದು, ಅದಕ್ಕೆ ವ್ಯವಸ್ಥಿತ ಪ್ರಸ್ತಾವನೆ ಸಲ್ಲಿಕೆ ಮಾಡುವಂತೆ ಜಲಮಂಡಳಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಜಲಮಂಡಳಿಯ ಅಧಿಕಾರಿಗಳು ಆಗಸ್ಟ್ ಕೊನೆಯ ವಾರದಲ್ಲಿ ಬೆಂಗಳೂರು ಜಲಮಂಡಳಿಯ ಸದಸ್ಯರು ಮತ್ತು ಸಾರ್ವಜನಿಕರೊಂದಿಗೆ ಸಭೆ ನಡೆಸಿ ಪ್ರಸ್ತಾವನೆ ಸಲ್ಲಿಸುವುದಕ್ಕೆ ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಕಳೆದ 10 ವರ್ಷದಲ್ಲಿ ವಿದ್ಯುತ್ ದರ ಏರಿಕೆ, ಯಂತ್ರೋಪಕರಣ ದರ, ಸಿಬ್ಬಂದಿ ವೆಚ್ಚ ಸೇರಿದಂತೆ ಮೊದಲಾದ ವಿಚಾರಗಳನ್ನು ಇಟ್ಟುಕೊಂಡು ದರ ಪರಿಷ್ಕರಣೆ ಕುರಿತು ಚರ್ಚೆ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ನಗರಕ್ಕೆ ಸುಸ್ಥಿರವಾಗಿ ನೀರು ಪೂರೈಕೆ ಅಗತ್ಯಕ್ಕೆ ತಕ್ಕಂತೆ ದರ ಪರಿಷ್ಕರಣೆ ಪ್ರಸ್ತಾವನೆ ಸಲ್ಲಿಸಲಾಗುವುದು. ಈವರೆಗೆ ನಿರ್ದಿಷ್ಟ ಪ್ರಮಾಣದಲ್ಲಿ ದರ ಪರಿಷ್ಕರಣೆ ಮಾಡಬೇಕೆಂದು ಚಿಂತನೆ ನಡೆಸಿಲ್ಲ ಎಂದು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.
ಸಂಭಾವನೀಯ ದರ ಏರಿಕೆ ವಿವರ( ಪ್ರತಿ ಸಾವಿರ ಲೀಟರ್‌ಗೆ)ನೀರಿನ ಪ್ರಮಾಣ(ಲೀ)ಪ್ರಸ್ತುತ ದರಪರಿಷ್ಕೃತ ಸಂಭಾವನೀಯ ದರ
0-8,0007 ರುಏರಿಕೆ ಇಲ್ಲ
8,001-25,00011 ರು15 ರು
25,001-50,00026ರು.30 ರು.